ಮಡಿಕೇರಿ, ಜೂ. ೧೬: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ಅವರು ತಾ. ೧೮ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ೧೯ ಸಂಭಾವ್ಯ ೩ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ೧೨.೩೦ ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.