ಮಡಿಕೇರಿ, ಜೂ. ೧೭: ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಆ ದಿಸೆಯಲ್ಲಿ ತಾ. ೧೮ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣ ಹಾಗೂ ಮಧ್ಯಾಹ್ನ ೨.೩೦ ಗಂಟೆಗೆ ಹಾರಂಗಿ ಜಲಾಶಯ ಬಳಿ ಎನ್‌ಡಿಆರ್‌ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯಿಂದ ಅಣಕು ಪ್ರದರ್ಶನ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದಾರೆ.