ಕುಶಾಲನಗರ, ಜೂ. ೨೦: ಪ್ರಕೃತಿ ಆರಾಧನೆ ಮೂಲಕ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಜಾನಪದ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದರು.

ಕುಶಾಲನಗರ ತಾಲೂಕು ಜಾನಪದ ಪರಿಷತ್ತು ಆಶ್ರಯದಲ್ಲಿ ಅರಣ್ಯ ಇಲಾಖೆ, ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಸಹಯೋಗದೊಂದಿಗೆ ಆನೆಕಾಡು ಮೀಸಲು ಅರಣ್ಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ‘ಜಾನಪದ ಮೈತ್ರಿ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ಮತ್ತು ಜಾನಪದ ನಡುವೆ ಅವಿನಾಭಾವ ಸಂಬAಧವಿದ್ದು, ಪ್ರಕೃತಿ ಜಾನಪದದ ಮೂಲವಾಗಿದೆ. ಪರಿಸರದ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ. ಚಂದ್ರು ಮಾತನಾಡಿ, ಅರಣ್ಯ ಸಂರಕ್ಷಣೆ ಜೊತೆಗೆ ಪ್ರತಿಯೊಬ್ಬರೂ ಗಿಡ ಮರ ಬೆಳೆಸುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದರು.

ಆನೆಕಾಡು ಮೀಸಲು ಅರಣ್ಯದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾಡು ಗಿಡಗಳ ಬೀಜ ಬಿತ್ತುವ ಕಾರ್ಯಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ. ಚಂದ್ರು ಮಾತನಾಡಿ, ಅರಣ್ಯ ಸಂರಕ್ಷಣೆ ಜೊತೆಗೆ ಪ್ರತಿಯೊಬ್ಬರೂ ಗಿಡ ಮರ ಬೆಳೆಸುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದರು.

ಆನೆಕಾಡು ಮೀಸಲು ಅರಣ್ಯದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾಡು ಗಿಡಗಳ ಬೀಜ ಬಿತ್ತುವ ಕಾರ್ಯಕ್ಕೆ ಕಾರ್ಯಕ್ರಮದಲ್ಲಿ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಸ್.ಇ. ಮುನೀರ್ ಅಹಮದ್, ಖಜಾಂಚಿ ಸಂಪತ್ ಕುಮಾರ್ ಸರಳಾಯ, ಜೋಯಪ್ಪ, ಕೃಪಾದೇವರಾಜ್, ವೀಣಾಕ್ಷಿ ರವಿಕುಮಾರ್, ಕೆ.ವಿ ಕವಿತ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಮಂಜೇಗೌಡ, ಆನಂದ್, ಸಂಜು, ಮಂಜು, ದಿನೇಶ್, ಪರಿಷತ್ತಿನ ತಾಲೂಕು ಪ್ರಮುಖರಾದ ಸುನೀತ ಸಾಗರ್, ವಿನೋದ್, ಪಿ.ವಿ. ಅಕ್ಷಯ್, ತೋರೆರ ಉದಯ್ ಕುಮಾರ್, ಕೊಡಗನ ಹರ್ಷ, ವಿನಯ್, ವನಿತಾ ಚಂದ್ರಮೋಹನ್, ಮತ್ತಿತರರು ಇದ್ದರು.