ಸಿದ್ದಾಪುರ, ಜೂ. ೨೦: ಕಾಡಾನೆಗಳನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಅರಣ್ಯ ಇಲಾಖಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನೇ ಕಾಡಾನೆಗಳು ಬೆನ್ನಟ್ಟಿದ ಘಟನೆ ವಾಲ್ನೂರು - ತ್ಯಾಗತ್ತೂರು ಗ್ರಾಮದಲ್ಲಿ ಭಾನುವಾರ ಸಿದ್ದಾಪುರ, ಜೂ. ೨೦: ಕಾಡಾನೆಗಳನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಅರಣ್ಯ ಇಲಾಖಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನೇ ಕಾಡಾನೆಗಳು ಬೆನ್ನಟ್ಟಿದ ಘಟನೆ ವಾಲ್ನೂರು - ತ್ಯಾಗತ್ತೂರು ಗ್ರಾಮದಲ್ಲಿ ಭಾನುವಾರ ಸಿದ್ದಾಪುರ, ಜೂ. ೨೦: ಕಾಡಾನೆಗಳನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಅರಣ್ಯ ಇಲಾಖಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನೇ ಕಾಡಾನೆಗಳು ಬೆನ್ನಟ್ಟಿದ ಘಟನೆ ವಾಲ್ನೂರು - ತ್ಯಾಗತ್ತೂರು ಗ್ರಾಮದಲ್ಲಿ ಭಾನುವಾರ ಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದರು.

ಭಾನುವಾರದಂದು ಕುಶಾಲನಗರ ವ್ಯಾಪ್ತಿಯ ಎ.ಸಿ.ಎಫ್. ನೆಹರು ಮಾರ್ಗ ದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ ನೇತೃತ್ವದಲ್ಲಿ ವಾಲ್ನೂರು - ತ್ಯಾಗತ್ತೂರು ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯನ್ನು ನಡೆಸ ಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆಗಳನ್ನು ಓಡಿಸಲು

(ಮೊದಲ ಪುಟದಿಂದ) ಪಟಾಕಿಗಳನ್ನು ಸಿಡಿಸುವ ಸಂದರ್ಭ ದಲ್ಲಿ ಕಾಡಾನೆಗಳ ಹಿಂಡಿನಲ್ಲಿದ್ದ ಎರಡು ಸಲಗಗಳು ಕೋಪಗೊಂಡು ಅರಣ್ಯ ಇಲಾಖಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಬೆನ್ನಟ್ಟಿ ದಾಳಿಗೆ ಮುಂದಾಗಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖಾ ಸಿಬ್ಬಂದಿಗಳು ಕೆಸರಿನಲ್ಲೇ ಎದ್ದು ಬಿದ್ದು ಓಡಿ ತಪ್ಪಿಸಿಕೊಂಡಿದ್ದಾರೆ. ಆದರೂ ಕೂಡ ಛಲ ಬಿಡದ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಮುಂದುವರಿಸಿದರು. ಆದರೆ ಕಾಫಿ ತೋಟದೊಳಗೆ ಎಷ್ಟೇ ಶ್ರಮಪಟ್ಟು ಕಾರ್ಯಾಚರಣೆ ನಡೆಸಿದರೂ ಕೂಡ ಕಾಡಾನೆಗಳು ಕಾಫಿ ತೋಟವನ್ನು ಬಿಟ್ಟು ಕದಲಲು ಹಿಂದೇಟು ಹಾಕುತ್ತಿದ್ದವು ಎಂದು ಅರಣ್ಯ ಇಲಾಖಾ ಸಿಬ್ಬಂದಿಗಳು ತಿಳಿಸಿದ್ದಾರೆ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಸಂದರ್ಭದಲ್ಲಿ ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಲಗ್ಗೆಯಿಡುತ್ತಾ ಅರಣ್ಯ ಇಲಾಖಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಸುತ್ತಾಡಿಸುತ್ತಾ ಸುಸ್ತು ಬರಿಸಿತು.

ಮಳೆಯಲ್ಲಿ ಕಾಡಾನೆಗಳು ಸಿಬ್ಬಂದಿಗಳ ಬೆವರಿಳಿಸಿತ್ತು. ಆಹಾರವನ್ನು ಅರಸಿಕೊಂಡು ಬಂದು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಸಂದರ್ಭದಲ್ಲಿ ಮರಿಯಾನೆಗಳು ಹಾಗೂ ಹೆಣ್ಣಾನೆಗಳು ಕಾರ್ಯಾಚರಣೆ ಸಂದರ್ಭದಲ್ಲಿ ಕಂಡುಬAತು ಎಂದು ಸಿಬ್ಬಂದಿಗಳು ಮಾಹಿತಿ ನೀಡಿದರು. ವಾಲ್ನೂರು - ತ್ಯಾಗತ್ತೂರು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ದುಬಾರೆ ಹಾಗೂ ಮೀನುಕೊಲ್ಲಿ ಅರಣ್ಯಕ್ಕೆ ಅಟ್ಟಲಾಯಿತು. ಆದರೆ, ಕಾಡಿಗೆ ತೆರಳಿದ ಕಾಡಾನೆಗಳು ಮರಳಿ ರಾತ್ರಿ ಸಮಯದಲ್ಲಿ ಹಿಂತಿರುಗಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸುತ್ತಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಕಾಡಾನೆಗಳು ಎರಡು ಮೂರು ಗುಂಪುಗಳಾಗಿ ವಿಂಗಡಣೆಯಾಗಿದ್ದು, ಕಾರ್ಯಾಚರಣೆ ನಡೆಸಿದರೂ ಕೂಡ ಕಾಡಾನೆಗಳು ನೆಲ್ಯಹುದಿಕೇರಿ ಗ್ರಾಮ, ಅಭ್ಯತ್‌ಮಂಗಲ, ಅತ್ತಿಮಂಗಲ ಈ ಭಾಗದಿಂದ ಕಾಡಾನೆಗಳು ತೋಟ ಬಿಟ್ಟು ಕದಲಿರುವುದಿಲ್ಲ. ಇದರಿಂದಾಗಿ ಕಾರ್ಯಾಚರಣೆ ಭಾನುವಾರ ಸಂಜೆಗೆ ಸ್ಥಗಿತಗೊಳಿಸಲಾಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ೪ ಸಲಗ ಹಾಗೂ ೩ ಮರಿಯಾನೆಗಳು ಕಂಡುಬAತು ಎಂದು ಅರಣ್ಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಮತ್ತೆ ಕಾರ್ಯಾಚರಣೆ

ನೆಲ್ಯಹುದಿಕೇರಿ, ಅಭ್ಯತ್ ಮಂಗಲ, ಅತ್ತಿಮಂಗಲ ಭಾಗದಲ್ಲಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟಲು ಪ್ರಯತ್ನಿಸಿದರೂ ಕಾಡಾನೆಗಳು ಕಾಫಿ ತೋಟ ಬಿಟ್ಟು ಕದಲದೇ ತೋಟದೊಳಗೆ ಸುತ್ತಾಡುತ್ತಿರುವ ಹಿನ್ನೆಲೆಯಲ್ಲಿ ತಾ. ೨೧ರಂದು (ಇಂದು) ಮತ್ತೆ ಕಾರ್ಯಾಚರಣೆ ನಡೆಸಲಾಗುವು ದೆಂದು ಉಪ ವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ ತಿಳಿಸಿದ್ದಾರೆ.

೨೦ಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. -

ವರದಿ : ಎ.ಎನ್. ವಾಸು