ಬೆAಗಳೂರು, ಜೂ. ೧೯: ಕೊಡಗು ಸೇರಿದಂತೆ ೧೩ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ ೫ಕ್ಕಿಂತ ಹೆಚ್ಚಿರುವ ಹಿನ್ನೆಲೆ ಸದ್ಯಕ್ಕೆ ಜಿಲ್ಲೆಯಲ್ಲಿರುವ ಬಿಗಿನಿಯಮಗಳು ಮುಂದಿನ ಆದೇಶದ ತನಕ ಮುಂದುವರೆಯಲಿವೆ.
ಲಾಕ್ಡೌನ್ ಸಡಿಲಿಕೆ ಸಂಬAಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಳೆದ ಒಂದು ವಾರದಲ್ಲಿ ೧೬ ಜಿಲ್ಲೆಗಳಲ್ಲಿ ೫% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, ೧೩ ಜಿಲ್ಲೆಗಳಲ್ಲಿ ಶೇ.೫ ರಿಂದ ೧೦% ಇದ್ದು, ಮೈಸೂರಿನಲ್ಲಿ ಶೇ ೧೦ ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.
ಶೇ ೫ ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್
(ಮೊದಲ ಪುಟದಿಂದ) ಜಿಲ್ಲೆಗಳಿಗೆ ಎಲ್ಲಾ ಅಂಗಡಿಗಳನ್ನು ಸಂಜೆ ೫ ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು. ಎಸಿ ಚಾಲನೆಗೊಳಿಸದೆ ಹೋಟೆಲ್, ಕ್ಲಬ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ ೫ ಗಂಟೆವರೆಗೆ ಶೇ ೫೦ ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಹೊರಾಂಗಣ ಚಿತ್ರೀಕರಣಕ್ಕೆ ವಿನಾಯಿತಿ ನೀಡಲಾಗಿದ್ದು, ಬಸ್ ಮತ್ತು ಮೆಟ್ರೋ ಶೇ. ೫೦ ಸಾಮರ್ಥ್ಯ ದೊಂದಿಗೆ ಕಾರ್ಯನಿರ್ವಹಣೆಗೆ, ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ, ಸರಕಾರಿ, ಖಾಸಗಿ ಕಚೇರಿಗಳಿಗೆ ಶೇ ೫೦ ರ ಸಾಮರ್ಥ್ಯ ದೊಂದಿಗೆ, ಹವಾ ನಿಯಂತ್ರಣ ಇಲ್ಲದೇ ಜಿಮ್ಗಳಲ್ಲಿ ಶೇ ೫೦ ಸಾಮರ್ಥ್ಯದೊಂದಿಗೆ, ಲಾಡ್ಜ್ ಮತ್ತು ರೆಸಾರ್ಟ್ಗಳಲ್ಲಿ ಶೇ ೫೦ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ.
ಶೇ ೫ ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ೧೩ ಜಿಲ್ಲೆಗಳಾದ ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ತಾ.೧೧ ರಂದು ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ ಎಂದು ತಿಳಿಸಿದರು.
ಶೇ. ೧೦ ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ ೭ ಗಂಟೆಯಿAದ ಬೆಳಗ್ಗೆ ೫ ಗಂಟೆ ತನಕ ಇರಲಿದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ ೭ ಗಂಟೆಯಿAದ ಸೋಮವಾರ ಬೆಳಿಗ್ಗ ೫ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರವು ಶೇ. ೫೦ ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.