ಮಡಿಕೇರಿ, ಜೂ. ೨೦: ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ, ಸಿಬ್ಬಂದಿ ವರ್ಗದವರಿಗೆ ಕೂಡಲೇ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌ನ ವೀರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎರಡನೇ ಅಲೆಯಲ್ಲಿ ರಾಜ್ಯ ಹಾಗೂ ದೇಶದಲ್ಲಿ ಹಲವಾರು ಶಿಕ್ಷಕರು ಕೊರೊನಾ ಸೋಂಕಿನಿAದ ಮೃತಪಟ್ಟಿದ್ದಾರೆ. ಸರಕಾರದ ಮಾನದಂಡದಲ್ಲಿ ಕೋವಿಡ್ ವಾರಿಯರ್ಸ್ ಶಿಕ್ಷಕರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ವೀರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮಡಿಕೇರಿ, ಜೂ. ೨೦: ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ, ಸಿಬ್ಬಂದಿ ವರ್ಗದವರಿಗೆ ಕೂಡಲೇ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌ನ ವೀರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎರಡನೇ ಅಲೆಯಲ್ಲಿ ರಾಜ್ಯ ಹಾಗೂ ದೇಶದಲ್ಲಿ ಹಲವಾರು ಶಿಕ್ಷಕರು ಕೊರೊನಾ ಸೋಂಕಿನಿAದ ಮೃತಪಟ್ಟಿದ್ದಾರೆ. ಸರಕಾರದ ಮಾನದಂಡದಲ್ಲಿ ಕೋವಿಡ್ ವಾರಿಯರ್ಸ್ ಶಿಕ್ಷಕರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ವೀರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಅಧಿಕಾರಿಯ ಸಹಿ ಮತ್ತು ಮೊಹರು ಹಾಕಿಸಲು ತೆರಳಿದರೆ ಮಡಿಕೇರಿಗೆ ತೆರಳಬೇಕು ಎಂದು ತಿಳಿಸುತ್ತಾರೆ. ಇದಕ್ಕೆ ಜಿಲ್ಲಾಡಳಿತ ಬದಲಿ ವ್ಯವಸ್ಥೆ ಮಾಡಬೇಕು.

ಕೋವಿಡ್ ಸಂದರ್ಭದಲ್ಲಿ ಬೇರೆ ಬೇರೆ ಕಡೆಯಿಂದ ಮಡಿಕೇರಿಗೆ ಹೋಗಿ ಬರುವುದು ಕಷ್ಟವಾಗಿದೆ. ಸರಕಾರ, ಶಾಲಾ - ಕಾಲೇಜುಗಳನ್ನು ಹಂತಹAತವಾಗಿ ಪ್ರಾರಂಭಿಸಿದರೆ ಇದು ಶಿಕ್ಷಕರಿಗೆ ಮಾರಕವಾಗಬಹುದು. ಆದ್ದರಿಂದ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಕೂಡಲೇ ಎಲ್ಲಾ ಶಿಕ್ಷಕರು, ಉಪನ್ಯಾಸಕರಿಗೂ ಹಾಗೂ ಶಾಲಾ - ಕಾಲೇಜಿನ ಎಲ್ಲಾ ಸಿಬ್ಬಂದಿಗೆ ಲಸಿಕೆ ನೀಡುವಂತಾಗ ಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.