ಮಡಿಕೇರಿ, ಜೂ. ೨೧ : ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದAತೆ ಈಗಾಗಲೇ ಗುರುತಿಸಲಾಗಿರುವ ಸೂಕ್ಷö್ಮ ಪ್ರದೇಶದ ಜನರನ್ನು ಕಾಳಜಿ ಕೇಂದ್ರಕ್ಕೆ ಜುಲೈ, ೧೫ ರೊಳಗೆ ಸ್ಥಳಾಂತರಿಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಈಗಾಗಲೇ ಮುಂಗಾರು ಆರಂಭವಾಗಿದ್ದು, ಕಳೆದ ವಾರ ಹೆಚ್ಚಿನ ಮಳೆಯಾಗಿದೆ. ಹಾಗೆಯೇ ಕಳೆದ ಮೂರು ವರ್ಷದಲ್ಲಿ ಆಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಧಾರಾಕಾರ ಮಳೆಯಾಗಿ ಅವಘಡಗಳು ಸಂಭವಿಸಿರುವುದರಿAದ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ.
ಕಾಳಜಿ ಕೇಂದ್ರದಲ್ಲಿ ೧೦೦ ಮಂದಿ
ಸೂಕ್ಷö್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯುವುದರ ಜೊತೆಗೆ, ಕಾಳಜಿ ಕೇಂದ್ರದಲ್ಲಿ ಶೌಚಾಲಯ, ಸ್ನಾನದ ಮನೆ, ಬಿಸಿನೀರು ಮತ್ತಿತರ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು.
ಕಾಳಜಿ ಕೇಂದ್ರ ಸಂಬAಧಿಸಿದAತೆ ಶಾಲಾ ಕಾಲೇಜು, ಸಮುದಾಯ ಭವನ, ಕಲ್ಯಾಣ ಮಂಟಪಗಳು ಹೀಗೆ ಹಲವು ಕಾಳಜಿ ಕೇಂದ್ರಗಳನ್ನು ಗುರುತಿಸಬೇಕು. ಯಾವುದೇ ಕಾಳಜಿ ಕೇಂದ್ರದಲ್ಲಿ ೧೦೦ ಜನರಿಗಿಂತ ಹೆಚ್ಚು ಇರಬಾರದು. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಕೋವಿಡ್-೧೯ ಹಿನ್ನೆಲೆ ಸೂಕ್ಷö್ಮ ಪ್ರದೇಶದಿಂದ ಸ್ಥಳಾಂತರವಾಗುವ ಕುಟುಂಬದ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪಡೆದಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆಯಬೇಕು. ಪಡೆಯದಿದ್ದಲ್ಲಿ ಲಸಿಕೆ ಕೊಡಿಸಬೇಕು. ಆ ನಿಟ್ಟಿನಲ್ಲಿ ಪರಿಶೀಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಳಜಿ ಕೇಂದ್ರದಲ್ಲಿ ೧೦೦ ಮಂದಿ
ಸೂಕ್ಷö್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯುವುದರ ಜೊತೆಗೆ, ಕಾಳಜಿ ಕೇಂದ್ರದಲ್ಲಿ ಶೌಚಾಲಯ, ಸ್ನಾನದ ಮನೆ, ಬಿಸಿನೀರು ಮತ್ತಿತರ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು.
ಕಾಳಜಿ ಕೇಂದ್ರ ಸಂಬAಧಿಸಿದAತೆ ಶಾಲಾ ಕಾಲೇಜು, ಸಮುದಾಯ ಭವನ, ಕಲ್ಯಾಣ ಮಂಟಪಗಳು ಹೀಗೆ ಹಲವು ಕಾಳಜಿ ಕೇಂದ್ರಗಳನ್ನು ಗುರುತಿಸಬೇಕು. ಯಾವುದೇ ಕಾಳಜಿ ಕೇಂದ್ರದಲ್ಲಿ ೧೦೦ ಜನರಿಗಿಂತ ಹೆಚ್ಚು ಇರಬಾರದು. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಕೋವಿಡ್-೧೯ ಹಿನ್ನೆಲೆ ಸೂಕ್ಷö್ಮ ಪ್ರದೇಶದಿಂದ ಸ್ಥಳಾಂತರವಾಗುವ ಕುಟುಂಬದ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪಡೆದಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆಯಬೇಕು. ಪಡೆಯದಿದ್ದಲ್ಲಿ ಲಸಿಕೆ ಕೊಡಿಸಬೇಕು. ಆ ನಿಟ್ಟಿನಲ್ಲಿ ಪರಿಶೀಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅದಕ್ಕಿಂತ ಮೊದಲು ವಿದ್ಯುತ್ ಮಾರ್ಗಗಳ ಸುಸ್ಥಿತಿ ಬಗ್ಗೆ ಗಮನ ಹರಿಸಬೇಕು ಎಂದು ಸೆಸ್ಕ್ ಇಂಜಿನಿಯರ್ಗೆ ನಿರ್ದೇಶನ ನೀಡಿದರು. ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳು ಪ್ರಾಕೃತಿಕ ವಿಕೋಪ ಎದುರಿಸಲು ಹಿಟಾಚಿ, ಜೆಸಿಬಿ ಜೊತೆಗೆ ವಾಹನ ಚಾಲಕರು ಇರಬೇಕು. ಜಿಲ್ಲೆಯ ೧೭ ಕಡೆಗಳಲ್ಲಿ ಗೋಶಾಲೆ ತೆರೆದು ಸೂಕ್ಷö್ಮ ಪ್ರದೇಶದ ಜಾನುವಾರುಗಳನ್ನು ಸ್ಥಳಾಂತರಿಸಬೇಕು ಎಂದು ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸೂಕ್ಷö್ಮ ಪ್ರದೇಶದ ಜನರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಕಾಳಜಿ ಕೇಂದ್ರ ತೆರೆಯಬೇಕು ಎಂದು ಅವರು ಸಲಹೆ ಮಾಡಿದರು.
ಕಾಳಜಿ ಕೇಂದ್ರದಲ್ಲಿ ಶೌಚಾಲಯ, ಸ್ನಾನದ ಮನೆ, ಬಿಸಿನೀರು, ವಿದ್ಯುತ್ ಸಂಪರ್ಕ, ಹೀಗೆ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಯೋಜನೆ ತಯಾರಿಸಲಾಗಿದ್ದು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ, ಅಧಿಕಾರಿಗಳು ಸೇರಿದಂತೆ ಸ್ಥಳೀಯ ವಾಲೆಂಟರ್ಗಳನ್ನು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಸಹಕಾರ ಪಡೆಯಬೇಕು.
ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ ಸಂಬAಧಿಸಿದAತೆ ಮೊದಲೇ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿ.ಪಂ. ಸಿಇಓ ಭನ್ವರ್ ಸಿಂಗ್ ಮೀನಾ ಅವರು ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತಷ್ಟು ಎಚ್ಚರ ವಹಿಸಬೇಕಿದೆ. ಒಂದು ವಾರದಿಂದ ೧೦ ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ಎಲ್ಲೆಲ್ಲಿ ಕಂಡು ಬಂದಿದೆ ಎಂದು ಮಾಹಿತಿ ನೀಡುವಂತೆ ಸೂಚಿಸಿದರು.
ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ನೋಡಲ್ ಅಧಿಕಾರಿಗಳಾದ ನಟರಾಜು, ವಿರೂಪಾಕ್ಷ, ರಾಜಶೇಖರ, ರಾಜೇಂದ್ರ ಕುಮಾರ್, ಶಶಿಧರ, ಶ್ರೀನಿವಾಸ್, ಶಿವಕುಮಾರ್, ಗುರುಶಾಂತಪ್ಪ, ತಮ್ಮಯ್ಯ, ಲಿಂಗರಾಜು, ಕೆ.ಟಿ.ದರ್ಶನ್, ಕೃಷ್ಣಪ್ರಸಾದ್ ಇತರರು ತಮ್ಮ ಹೋಬಳಿ ವ್ಯಾಪ್ತಿಯಲ್ಲಿ ಪರಿಹಾರ ಕೇಂದ್ರ ತೆರೆಯುವ ಬಗ್ಗೆ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಹಾರಂಗಿ ಜಲಾಶಯ ಅಧೀಕ್ಷಕ ಎಂಜಿನಿಯರ್ ಚೆನ್ನಕೇಶವ, ಅನಿಲ್ ಬಗಟಿ ಅವರು ಹಲವು ಮಾಹಿತಿ ನೀಡಿದರು. ನಾನಾ ಇಲಾಖಾ ಅಧಿಕಾರಿಗಳು ಇದ್ದರು.