ಮಡಿಕೇರಿ, ಜೂ. ೨೧ : ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಮವಾರ ೧೯೧ ಪ್ರಕರಣಗಳು ದೃಢಪಟ್ಟಿವೆ. ಕಳೆದ ೨೪ ಗಂಟೆಗಳಲ್ಲಿ ೩ ಸಾವು ಸಂಭವಿಸಿದ್ದು, ಪಾಸಿಟಿವಿಟಿ ಪ್ರಮಾಣ ಶೇ. ೧೫.೭೫ಕ್ಕೆ ಏರಿಕೆಯಾಗಿದೆ.

ಮಡಿಕೇರಿ ತಾಲೂಕಿನಲ್ಲಿ ೩೧, ಸೋಮವಾರಪೇಟೆ ತಾಲೂಕಿನಲ್ಲಿ ೬೫, ವೀರಾಜಪೇಟೆ ತಾಲೂಕಿನಲ್ಲಿ ೯೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೮,೧೭೪ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೩೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೬,೮೫೬ ಮಂದಿ ಗುಣಮುಖರಾಗಿದ್ದಾರೆ. ೯೫೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೩ ಸಾವು ಉಂಟಾಗಿದ್ದು, ಒಟ್ಟು ೩೫೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೭೧ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೧೫.೭೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.