ಕುಶಾಲನಗರ, ಜೂ. ೨೧: ಬೆಂಗಳೂರು ನಗರದಲ್ಲಿ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಮಡಿಕೇರಿಯಿಂದ ಬೆಂಗಳೂರು ಕಡೆಗೆ ಐರಾವತ ಬಸ್ ಸಂಚಾರ ಪ್ರಾರಂಭಗೊAಡಿದೆ. ಕುಶಾಲನಗರ ಮೂಲಕ ಇಲವಾಲ ಮಾರ್ಗವಾಗಿ ಶ್ರೀರಂಗಪಟ್ಟಣ ಮಾರ್ಗದಲ್ಲಿ ಬೆಂಗಳೂರಿಗೆ ಕೆಲವು ಬಸ್ಸುಗಳ ಸಂಚಾರ ಪ್ರಾರಂಭಿಸಲಾಗಿದೆ ಎಂದು ಕುಶಾಲನಗರ ಸಾರಿಗೆ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ಕೆಲವು ಬಸ್ಸುಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.