ಕುಶಾಲನಗರ, ಜೂ. ೨೨: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ ಗುಡ್ಡೆಹೊಸೂರು-ಬಾಳುಗೋಡು ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿರುವ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾಮಗಾರಿ ಅಂದಾಜು ಪಟ್ಟಿಯಂತೆ ನಡೆಯದಿದ್ದಲ್ಲಿ ಸಂಬAಧಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅವರು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಬಳಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಬಗ್ಗೆ ಸಂಬAಧಿಸಿದ ಗುಣಮಟ್ಟ ಪರಿಶೀಲನಾ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಗುಡ್ಡೆಹೊಸೂರು-ಬಾಳುಗೋಡು ವ್ಯಾಪ್ತಿಯ ೪.೮ ಕಿ.ಮೀ ಉದ್ದದ ರಸ್ತೆ ಅಂದಾಜು ರೂ.೧೩ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಒಟ್ಟು ೧೧ ಮೀಟರ್ ಅಗಲದ ರಸ್ತೆಯಲ್ಲಿ ಪಾದಚಾರಿಗಳಿಗೆ ಓಡಾಡಲು, ಚರಂಡಿ ಇನ್ನಿತರ ಮೂಲಭೂತ ಸೌಕರ್ಯ ಕಲ್ಪಿಸಬೇಕಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಕಳಪೆ ಗುಣಮಟ್ಟದ ಜಲ್ಲಿ ಮತ್ತಿತರ ವಸ್ತುಗಳನ್ನು ಬಳಸಿ ರಸ್ತೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಲಾಂಪ್ಸ್ ಅಧ್ಯಕ್ಷ ಆರ್.ಕೆ. ಚಂದ್ರ, ನಂಗಾರು ಜಗ ಶಾಸಕರ ಗಮನಕ್ಕೆ ತಂದರು.

ಲ್ಯಾAಪ್ಸ್ ಅಧ್ಯಕ್ಷ ಆರ್.ಕೆ. ಚಂದ್ರ, ಸಮಾಜ ಸೇವಕರಾದ ನಂಗಾರು ಜಗ, ಮಾವಾಜಿ ರಕ್ಷಿತ್, ಬಗ್ಗನ ಅನಿಲ್ ಮತ್ತಿತರರು ಕಾಮಗಾರಿ ಸಮರ್ಪಕವಾಗಿ ಅಂದಾಜು ಪಟ್ಟಿಯಂತೆ ನಡೆಯುತ್ತಿಲ್ಲ ಎಂದು ದೂರಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಗುಡ್ಡೆಹೊಸೂರು-ಬಾಳುಗೋಡು ಹೆದ್ದಾರಿ ರಸ್ತೆ ಕಾಮಗಾರಿ ಅಂದಾಜು ಪಟ್ಟಿಯಂತೆ ನಡೆಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್ ‘ಶಕ್ತಿ’ಗೆ ತಿಳಿಸಿದ್ದಾರೆ. ಮಳೆ ಪ್ರಮಾಣ ಅಧಿಕವಾದಲ್ಲಿ ಡಾಂಬರೀಕರಣ ಮತ್ತು ಕಾಂಕ್ರೀಟೀಕರಣ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಡ್ಡೆಹೊಸೂರು-ಬಾಳುಗೋಡು ರಾಜ್ಯ ಹೆದ್ದಾರಿ ಕಾಮಗಾರಿ ಅಂದಾಜು ಪಟ್ಟಿಯಂತೆ ನಡೆಯುತ್ತಿಲ್ಲ ಎಂಬ ಬಗ್ಗೆ ‘ಶಕ್ತಿ’ಯಲ್ಲಿ ಹಲವು ಬಾರಿ ವರದಿ ಪ್ರಕಟಗೊಂಡಿರು ವುದನ್ನು ಇಲ್ಲಿ ಗಮನಿಸಬಹುದು.