ಕೂಡಿಗೆ, ಜೂ. ೨೨: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು

ಕಾವೇರಿ ಹಾರಂಗಿ ನದಿಯು ಸೇರುವ ಹಳೆ ಕೂಡಿಗೆಯ ಸಂಗಮ ಜಾಗಕ್ಕೆ ತೆರಳುವ ದಾರಿಯು ಸಮರ್ಪಕವಾಗಿ ಇಲ್ಲದ್ದರಿಂದ ದಾರಿ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸಲು ಸಭೆಯಲ್ಲಿ ಹಾಜರಿದ್ದ ಸದಸ್ಯರು ಒಕ್ಕೊರಲಿನಿಂದ ತೀರ್ಮಾನ ಕೈಗೊಂಡರು

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. ನಂತರ ಬ್ಯಾಡಗೊಟ್ಟ ಗ್ರಾಮದಲ್ಲಿ ವಸತಿ ರಹಿತರಿಗೆ ಕಾದಿರಿಸುವ ಜಾಗದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರಾದ ಟಿ.ಪಿ. ಹಮೀದ್, ಶಿವಕುಮಾರ್ ಒತ್ತಾಯಿಸಿದರು.

ಸಭೆಯಲ್ಲಿ ಕೊರೊನಾ ತಡೆಗೆ ಕ್ರಮಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯಿತು. ಸಭೆಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರುಗಳಾದ ಕೆ.ಟಿ. ಗಣಿತ, ಟಿ.ಪಿ. ಹಮೀದ್, ಶಿವಕುಮಾರ್, ವಾಣಿ, ರತ್ನಮ್ಮ, ಹೆಚ್.ಎಸ್. ರವಿ, ಜಯಶ್ರೀ, ಪಲ್ಲವಿ, ಲಕ್ಮಿ, ಚಂದ್ರು, ಜಯಶೀಲಾ ಸೇರಿದಂತೆ ಕಾರ್ಯದರ್ಶಿ ಶಿಲ್ಪಾ ಇದ್ದರು.