ಕೂಡಿಗೆ, ಜೂ. ೨೨: ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಮಾಸಿಕ ಸಭೆಯು ಗ್ರಾ.ಪಂ. ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಕೋವಿಡ್ ನಿಯಮಾವಳಿಗಳ ಪಾಲನೆ ಬಗ್ಗೆ ಚರ್ಚೆಗಳು ನಡೆದವು. ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಕೋವಿಡ್ ಕುರಿತಾದ ಮಾಹಿತಿಯನ್ನು ಅಭಿವೃದ್ಧಿ ಅಧಿಕಾರಿ ಸುಮೇಶ್ ಸಭೆಯಲ್ಲಿ ತಿಳಿಸಿದರು. ಮುಂಚೂಣಿ ಕಾರ್ಯಪಡೆಯ ಸದಸ್ಯರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಜಯಮ್ಮ, ಅಭಿವೃದ್ಧಿ ಅಧಿಕಾರಿ ಸುಮೇಶ್ ಹಾಗೂ ಸದಸ್ಯರು ಇದ್ದರು.