ಮಡಿಕೇರಿ, ಜೂ. ೨೨: ಪೊಲೀಸರ ದೌರ್ಜನ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿರುವ ವೀರಾಜಪೇಟೆಯ ಚಿಕ್ಕಪೇಟೆ ನಿವಾಸಿ ರಾಯ್ ಡಿಸೋಜಾ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿದ್ದ ಅಪರಾಧ ತನಿಖೆ ವಿಭಾಗದ (ಸಿಐಡಿ) ಅಧಿಕಾರಿಗಳು ಪ್ರಾಥಮಿಕ ತನಿಖೆ ಪೂರ್ಣಗೊಳಿಸಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ತಾ.೧೨ ರಂದು ವೀರಾಜಪೇಟೆಗೆ ಆಗಮಿಸಿದ ದಕ್ಷಿಣ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ (ಐಜಿ) ಪ್ರವೀಣ್ ಮಧುಕರ್ ಪವಾರ್ ಪ್ರಕರಣವನ್ನು ಸಿಐಡಿಗೆ ನೀಡಿದ್ದರು, ತಾ. ೧೨ ರ ರಾತ್ರಿ ಜಿಲ್ಲೆಗೆ ಆಗಮಿಸಿದ ತಂಡ ತನಿಖೆ ಕೈಗೆತ್ತಿಕೊಂಡಿತ್ತು.

ಇದೀಗ ಪ್ರಾಥಮಿಕ ತನಿಖೆ ಪೂರ್ಣಗೊಳಿಸಿರುವ ಅಧಿಕಾರಿಗಳು ಮಡಿಕೇರಿ ತಹಶೀಲ್ದಾರ್ ಅವರಿಂದ ರಾಯ್ ಡಿಸೋಜ ಅವರ ಮರಣೋತ್ತರ ಪರೀಕ್ಷೆಯ ವರದಿ, ಪ್ರಕರಣಕ್ಕೆ ಸಂಬAಧಿಸಿದ ಸಿಸಿಟಿವಿ ದೃಶ್ಯಾವಳಿ, ಕುಟುಂಬಸ್ಥರ ವೀಡಿಯೋ ಸಹಿತ ಹೇಳಿಕೆ ಅಲ್ಲದೆ ವೀರಾಜಪೇಟೆ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳ ಹೇಳಿಕೆ, ರಾಯ್ ಚಿಕಿತ್ಸೆಗೆ ದಾಖಲಾಗಿದ್ದ ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ನಡೆದ ಚಿತ್ರಣವನ್ನು ಕೇಳಿ ಪಡೆದುಕೊಂಡಿದ್ದಾರೆ.

ಬೇರೆ ತನಿಖೆಯ ನಿಮಿತ್ತ ಬೆಂಗಳೂರಿಗೆ ತೆರಳಿರುವ ತಂಡ, ಅಗತ್ಯವಾದರೆ ಮತ್ತೆ ಕೊಡಗಿಗೆ ಆಗಮಿಸಲಿದೆ ಎಂದು ತಿಳಿದುಬಂದಿದೆ.