ಮಡಿಕೇರಿ, ಜೂ.೨೪: ಜಿಲ್ಲೆಯಲ್ಲಿ ಗುರುವಾರ ೧೨೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೧೦೫ ಆರ್‌ಟಿಪಿಸಿಆರ್ ಮತ್ತು ೧೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೩೪, ಸೋಮವಾರಪೇಟೆ ತಾಲೂಕಿನಲ್ಲಿ ೪೯, ವೀರಾಜಪೇಟೆ ತಾಲೂಕಿನಲ್ಲಿ ೩೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೮,೫೪೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೯೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೭,೧೪೯ ಮಂದಿ ಗುಣಮುಖರಾಗಿದ್ದಾರೆ. ೧೦೩೧ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೬೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೧೬೩ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೫.೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.