ಮಡಿಕೇರಿ, ಜೂ. ೨೪: ಭಾರತೀಯ ಜನತಾ ಪಾರ್ಟಿ ಕೊಡಗು ಜಿಲ್ಲಾ ಶಾಖೆ ವತಿಯಿಂದ ೧೯೭೫ರ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಾ. ೨೫ ರಂದು (ಇಂದು) ವೆಬೆಕ್ಸ್ ಮೀಟ್‌ನಲ್ಲಿ ನಡೆಯಲಿದೆ.

ಬೆಳಿಗ್ಗೆ ೧೧.೩೦ ರಿಂದ ೧೨.೩೦ ರವರೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ವಿಷಯ ಮಂಡನೆ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಪ್ರಬಾರಿ ಹಾಗೂ ಕಾರ್ಯಕ್ರಮ ಸಂಚಾಲಕ ಬಿ.ಬಿ.ಭಾರತೀಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಪಾಲ್ಗೊಳ್ಳುವವರು hಣಣಠಿs://meeಣiಟಿggsಚಿಠಿಚಿಛಿ೩೦.ತಿebex.ಛಿom ಲಿಂಕ್ ಬಳಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.