ಮಡಿಕೇರಿ, ಜೂ. ೨೩: ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯ, ಮೆದುಳು ಜ್ವರ ಮತ್ತು ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಬಗ್ಗೆ ಸಂಬAಧಿಸಿದ ಇಲಾಖೆಗಳು ಪ್ರತೀ ೧೫ ದಿನಕ್ಕೊಮ್ಮೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಗಮನಹರಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ ಹಾಗೆಯೇ ಕಂದಾಯ ಹೀಗೆ ಹಲವು ಇಲಾಖೆಗಳು ತಮ್ಮ ವ್ಯಾಪ್ತಿಗೆ ಸಂಬAಧಿಸಿದAತೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಅವರು ಮಳೆಗಾಲ ಸಂದರ್ಭದಲ್ಲಿ ಮಲೇರಿಯಾ, ಡೆಂಗ್ಯೂ ಚಿಕುಂಗುನ್ಯ, ಮೆದುಳು ಜ್ವರ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಬಗ್ಗೆ ಜಾಗೃತಿ ವಹಿಸಬೇಕಿದೆ ಎಂದರು.
ಡಾ. ಆನಂದ್ ಅವರು ಮಾಹಿತಿ ನೀಡಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಗಮನಹರಿಸಬೇಕು. ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಪಾತ್ರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಸಮುದಾಯ ಆರೋಗ್ಯ ಅಧಿಕಾರಿ ಡಾ. ಮಹೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್, ತಾ.ಪಂ. ಇಒ ಶೇಖರ್, ನಗರಸಭೆ ಎಇಇ ರಾಜೇಂದ್ರ ಕುಮಾರ್, ಪರಿಸರ ಇಲಾಖೆ ಅಧಿಕಾರಿ ಗಣೇಶನ್ ಇತರರು ಇದ್ದರು.
ವಿವಿಧ ಇಲಾಖೆಗಳು ಕೈಗೊಳ್ಳಬೇಕಿರುವ ಕ್ರಮಗಳ ವಿವರ ಇಂತಿದೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್/ ಸಾರ್ವಜನಿಕ ಆರೋಗ್ಯ ಇಂಜಿನಿಯರ್ ಇಲಾಖೆ, ಗುಂಡಿಗಳು ಹಾಗೂ ತಗ್ಗುಗಳನ್ನು ಮುಚ್ಚಿಸುವುದರ ಮೂಲಕ ನೀರು ಸಂಗ್ರಹವಾಗದAತೆ ತಡೆಗಟ್ಟುವುದು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತವಾದ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಹುದುಗಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಮೇಲ್ಛಾವಣಿಯ ತೊಟ್ಟಿಗಳು ಹಾಗೂ ನೀರು ಸರಬರಾಜು ಮಾಡುವ ತೊಟ್ಟಿಗಳನ್ನು ಭದ್ರವಾದ ಮುಚ್ಚಳದಿಂದ ಮುಚ್ಚಬೇಕು.
ನಗರಾಭಿವೃದ್ಧಿ ಇಲಾಖೆ: ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳ್ಳುವುದು. ಸೊಳ್ಳೆರಹಿತ ಓವರ್ ಹೆಡ್ಟ್ಯಾಂಕ್ ಹಾಗೂ ಅಂಡರ್ಗ್ರೌAಡ್ ಟ್ಯಾಂಕ್ಗಳನ್ನು ನಿರ್ಮಿಸುವುದು ಅಗತ್ಯವಾದ ನಿಯಮಾವಳಿಗಳನ್ನು ಜಾರಿಗೊಳಿ ಸುವುದು ಮತ್ತು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸುವುದು.
ವಾರಕ್ಕೊಮ್ಮೆ ಸೊಳ್ಳೆನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಸಿಂಪಡಿಸುವುದು. ನೀರು ಸರಬರಾಜು ಮಾಡುವ ಮೊದಲು ಸೂಕ್ತವಾದ ಪ್ರಮಾಣದಲ್ಲಿ ಕ್ಲೋರಿನ್ ಹಾಕುವುದು. ರಸ್ತೆ ಬದಿಯಲ್ಲಿ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟವನ್ನು ನಿಷೇಧಿಸುವುದು ಮತ್ತು ಹೊಟೇಲುಗಳಲ್ಲಿ ಸ್ವಚ್ಫತೆ, ನೈರ್ಮಲ್ಯತೆ ಕಾಪಾಡುವಂತೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದು. ನಗರದ ವಿವಿಧ ಕೇಂದ್ರಗಳಿAದ ನೀರನ್ನು ಸಂಗ್ರಹಿಸಿ ಅವುಗಳನ್ನು ಕಾಲಕಾಲಕ್ಕೆ ತಪಾಸಣೆಗೆ ಕಳುಹಿಸುವುದು. ನೀರು ಸರಬರಾಜು ಪೈಪುಗಳನ್ನು ಆಗಿಂದಾಗ್ಗೆ ಪರೀಕ್ಷಿಸುವುದರ ಮೂಲಕ ಸೋರಿಕೆಯನ್ನು ತಡೆಗಟ್ಟುವುದು.
ಶಿಕ್ಷಣ ಇಲಾಖೆ: ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಅಂಗನವಾಡಿ ಕಾರ್ಯಕರ್ತರುಗಳ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಲು ಸಹಾಯ ಮಾಡುವುದು. ವೈಯಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು.
ಸಮಾಜ ಕಲ್ಯಾಣ ಇಲಾಖೆ: ಸೊಳ್ಳೆಗಳಿಂದ ಹರಡುವ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಕಾರ್ಯಗಾರದಲ್ಲಿ, ಸರ್ಕಾರೇತರ ಸಂಘ-ಸAಸ್ಥೆಗಳು, ಸ್ತಿçà ಶಕ್ತಿ ಸಂಘಗಳು, ಧಾರ್ಮಿಕ ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ, ಸಂಘಗಳು, ಭಾಗವಹಿಸುವಂತೆ ನೋಡಿಕೊಳ್ಳುವುದು ಹಾಗೂ ಈ ಸಂಸ್ಥೆಗಳ ಮೂಲಕ ಜನರಲ್ಲಿ ಈ ರೋಗಗಳು ಬಾರದಂತೆ ತಡೆಗಟ್ಟಲು ಅವಶ್ಯಕ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು.
ಮೀನುಗಾರಿಕೆ ಇಲಾಖೆ: ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬೂಸಿಯ ಇವುಗಳನ್ನು ಬೆಳೆಸಿ ರಾಜ್ಯಾದ್ಯಂತ ಲಭ್ಯವಾಗುವಂತೆ ನೋಡಿಕೊಳ್ಳುವುದು ಹಾಗೂ ಆರೋಗ್ಯ ಇಲಾಖೆಗೆ ಅಗತ್ಯ ಬಿದ್ದಾಗ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಒದಗಿಸುವುದು ಮತ್ತು ಇದರ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡುವುದು. ಶಾಶ್ವತ ನೀರಿನ ತಾಣಗಳ (ಕೆರೆ, ಕಟ್ಟೆ, ಕೊಳ, ಬಾವಿ, ಜರಿ) ಜಿಲ್ಲಾವಾರು ಜಿಐಎಸ್ ನಕ್ಷೆಗಳನ್ನು ತಯಾರಿಸುವುದು ಹಾಗೂ ಮಾಹಿತಿಯನ್ನು ಆರೋಗ್ಯ ಇಲಾಖೆ ಯೊಂದಿಗೆ ಹಂಚಿಕೊಳ್ಳುವುದು.
ಕೈಗಾರಿಕಾ ಇಲಾಖೆ: ಕೈಗಾರಿಕಾ ವಲಯಗಳಿಗೆ ವಲಸೆ ಬರುವ ಕಾರ್ಮಿಕರ ಬಗ್ಗೆ ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುವುದರ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಕಾಪಾಡುವುದು. ಕಾರ್ಮಿಕರು ವಾಸಿಸುವ ಕಾಲೋನಿಗಳಲ್ಲಿ ಸರಿಯಾದ ಒಳಚರಂಡಿಗಳನ್ನು ರೂಪಿಸುವುದು ಹಾಗೂ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸು ವುದು. ಕಾರ್ಮಿಕರಿಗೆ ಪ್ರತೇಕ್ಯವಾದ ಆರೋಗ್ಯ ಚೀಟಿಯನ್ನು ಒದಗಿ ಸುವುದರ ಮೂಲಕ ರೋಗವಾಹಕ ರೋಗಗಳ ತಪಾಸಣೆಗೆ ಆರೋಗ್ಯ ಇಲಾಖೆ ಜೊತೆ ಕೈಜೋಡಿಸುವುದು. ಹೊಸ ಕಾರ್ಮಿಕರು ಬಂದಾಗ ಆರೋಗ್ಯ ಇಲಾಖೆಗೆ ತಿಳಿಸುವುದು.
ನೀರಾವರಿ ಇಲಾಖೆ: ನೀರಾವರಿ ಯೋಜನೆಗಳಡಿಯಲ್ಲಿ ಕೆಲಸಕ್ಕಾಗಿ ಬರುವಕಾರ್ಮಿಕರು ಹಾಗೂ ಅವರ ಚಲನವಲನದ ಬಗ್ಗೆ ಮುಂಚಿತವಾಗಿ ಆರೋಗ್ಯ ಇಲಾಖೆಗೆ ತಿಳಿಸುವುದು. ಸೂಕ್ತ ತಾಂತ್ರಿಕ ವಿಧಾನಗಳನ್ನು ಅನುಸರಿಸುವುದರ ಮೂಲಕ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿಯಂತ್ರಣ ದಲ್ಲಿಡುವುದು, ಉದಾಹರಣೆಗೆ ಕಾಲುವೆಗಳ ಸೋರಿಕೆಯನ್ನು ನಿಯಂತ್ರಿಸುವುದರಿAದ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಹತೋಟಿಯಲ್ಲಿಡಬಹುದು.
ಕಂದಾಯ ಇಲಾಖೆ: ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳ ಸಭೆ ನಡೆಸಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯ ಕ್ರಮಗಳ ಅನುಷ್ಠಾನವನ್ನು ಪರಿಶೀಲಿಸುವುದು. ಜಿಲ್ಲಾಧಿಕಾರಿ ಅವರ ಮೂಲಕ ಎಲ್ಲಾ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಶುದ್ಧ ನೀರಿನ ಸರಬರಾಜು, ಇಲಿಗಳ ನಿಯಂತ್ರಣ ಹಾಗೂ ಪರಿಸರ ನೈರ್ಮಲ್ಯ ಕಾಪಾಡುವಿಕೆ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು. ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ.