ಮಡಿಕೇರಿ, ಜೂ. ೨೪: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯು ವತಿಯಿಂದ ಕೋವಿಡ್ ಪಾಸಿಟಿವ್ ಒಳಗಾಗಿ ಆಮ್ಲಜನಕದ ಅವಶ್ಯಕತೆ ಇರುವವರಿಗೆ ಅಥವಾ ಗೃಹ ಆರೈಕೆಯಲ್ಲಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಕೊಡಗು ಜಿಲ್ಲೆಯಾದ್ಯಂತ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಸೌಲಭ್ಯವನ್ನು ಆರಂಭಿಸಲಾಗಿದೆ.
ವೈದ್ಯಕೀಯ ದಾಖಲಾತಿಗಳಿದ್ದರೆ ಮಾತ್ರ ಈ ಸೌಲಭ್ಯವನ್ನು ಪಡೆಯಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಸ್ಥೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೪೪೮೦೪೭೮೫೯ ಹಾಗೂ ೯೯೬೪೧೦೩೩೨೨ ಅನ್ನು ಸಂಪರ್ಕಿಸಬಹುದಾಗಿದೆ.