ರಸ್ತೆ ಕಾಮಗಾರಿ ಆರಂಭ
ಲಸಿಕೆಯೊಂದರಿAದಲೇ ಕೊರೊನಾದಿಂದ ದೂರವಿರಲು ಸಾಧ್ಯ
ಬೆಂಗಳೂರು, ಜೂ. ೨೪: ಲಸಿಕೆಯೊಂದರಿAದಲೇ ಕೊರೊನಾ ಸೋಂಕಿನಿAದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-೧೯ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿAದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದರು. ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೆöÊದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ ೧,೭೬೦ ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬAಧಿಸಿದAತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದರು. ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು ೨೦ ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದರು. ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದರು. ರಾಜ್ಯದಲ್ಲಿರುವ ಸುಮಾರು ೧ ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತö್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಡೆಲ್ಟಾಪ್ಲಸ್ ರೂಪಾಂತರಿಗೆ ಮಧ್ಯಪ್ರದೇಶದಲ್ಲಿ ಮೊದಲ ಬಲಿ
ನವದೆಹಲಿ, ಜೂ. ೨೪: ದೇಶದಲ್ಲಿ ವ್ಯಾಪಕ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್ನ ಡೆಲ್ಟಾಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದ್ದು, ಮಧ್ಯ ಪ್ರದೇಶದಲ್ಲಿ ಸೋಂಕಿಗೆ ತುತ್ತಾಗಿದ್ದ ೨೩ ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ದೇಶದಲ್ಲಿ ನಿಧಾನಗತಿಯಲ್ಲಿ ಕೊರೊನಾ ರೂಪಾಂತರ ತಳಿ ಡೆಲ್ಟಾಪ್ಲಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವಾಗಲೇ ಡೆಲ್ಟಾಪ್ಲಸ್ ರೂಪಾಂತರ ತಳಿಗೆ ಮೊದಲ ಬಲಿ ಆಗಿದೆ. ಮಧ್ಯಪ್ರದೇಶದ ಭೂಪಾಲ್ನಲ್ಲಿ ೨೩ ವರ್ಷದ ಯುವತಿಯೊಬ್ಬರು ಡೆಲ್ಟಾಪ್ಲಸ್ ರೂಪಾಂತರ ತಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಂಕು ಕಾಣಿಸಿಕೊಂಡು ಭೂಪಾಲ್ನ ಪಾಟಿಧಾರ್ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸೇರಿದಂತೆ ಐವರಲ್ಲಿ ಡೆಲ್ಟಾಪ್ಲಸ್ ವೈರಸ್ ಪತ್ತೆಯಾಗಿತ್ತು. ಈ ಪೈಕಿ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಉಳಿದ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಸರ್ಕಾರ ಹೇಳಿದೆ. ಮೃತ ಯುವತಿ ಉಜೈನ್ ಮೂಲದ ನಿವಾಸಿಯಾಗಿದ್ದು, ಮೂವರು ಸೋಂಕಿತರು ಭೋಪಾಲ್ ಮತ್ತು ಇತರ ಇಬ್ಬರು ಉಜೈನ್ ನಿವಾಸಿಗಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಮಾತನಾಡಿದ್ದು, ರಾಜ್ಯದಲ್ಲಿ ಈವರೆಗೂ ೫ ಡೆಲ್ಟಾಪ್ಲಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಸಾವನ್ನಪ್ಪಿದ್ದು, ಉಳಿದ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ. ರಾಜ್ಯ ಸರ್ಕಾರ ಡೆಲ್ಟಾ ರೂಪಾಂತರ ನಿಯಂತ್ರಣಕ್ಕೆ ಸಕಲ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಮೃತ ಯುವತಿಯ ಗಂಡ ಎರಡೂ ಪ್ರಮಾಣದ ಕೋವಿಡ್ ಲಸಿಕೆ ಪಡೆದಿದ್ದರು ಎಂದು ಹೇಳಿದ ಸಚಿವ ವಿಶ್ವಾಸ್ ಸಾರಂಗ್ ಅವರು, ಡೆಲ್ಟಾಪ್ಲಸ್ ರೂಪಾಂತರಿ ಸೋಂಕಿಗೆ ತುತ್ತಾಗಿ ಗುಣಮುಖರಾದ ನಾಲ್ಕೂ ಮಂದಿ ಸೋಂಕಿತರು ಕೂಡ ಎರಡೂ ಪ್ರಮಾಣದ ಲಸಿಕೆ ಪಡೆದಿದ್ದರು ಎಂದು ಮಾಹಿತಿ ನೀಡಿದರು. ದೇಶದಲ್ಲಿ ಕೊರೊನಾ ವೈರಸ್ನ ರೂಪಾಂತರ ತಳಿ ಡೆಲ್ಟಾಪ್ಲಸ್ ಪತ್ತೆಯಾಗಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಡೆಲ್ಟಾಪ್ಲಸ್ ರೂಪಾಂತರ ತಳಿ ತಡೆಗೆ ಬಿಗಿಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಡೆಲ್ಟಾಪ್ಲಸ್ ಕಾಣಿಸಿಕೊಂಡಿರುವ ರಾಜ್ಯಗಳಿಗೆ ಕಂಟೈನ್ಮೆAಟ್ ವಲಯಗಳನ್ನು ಸ್ಥಾಪಿಸಿ ಬಿಗಿಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೊರೊನಾ ಡೆಲ್ಟಾಪ್ಲಸ್ ರೂಪಾಂತರ ತಳಿ ಕಾಣಿಸಿಕೊಂಡಿರುವ ಮಹಾರಾಷ್ಟç, ಕೇರಳ, ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ಜಮ್ಮು-ಕಾಶ್ಮೀರ ಸೇರಿದಂತೆ ಎಲ್ಲ ರಾಜ್ಯಗಳಿಗೂ ಡೆಲ್ಟಾಪ್ಲಸ್ ತಡೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವ ಕೇಂದ್ರ ಸರ್ಕಾರ ಡೆಲ್ಟಾಪ್ಲಸ್ನ ಪ್ರಸರಣ ತೀವ್ರವಾಗಿರುವ ಮಹಾರಾಷ್ಟç, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಡೆಲ್ಟಾಪ್ಲಸ್ ರೂಪಾಂತರ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಅದರ ಸಮೀಕ್ಷೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಪುಣೆಯ ವೈರಾಣು ಸಂಸ್ಥೆ ಮುಂದಾಗಿದೆ. ಡೆಲ್ಟಾಪ್ಲಸ್ ರೂಪಾಂತರ ಸೋಂಕು ಕಾಣಿಸಿಕೊಂಡಿರುವ ರಾಜ್ಯಗಳಲ್ಲಿ ಮೊದಲು ಅಧ್ಯಯನ ಮಾಡಿ ಆನಂತರ ದೇಶದ ಎಲ್ಲ ರಾಜ್ಯಗಳಲ್ಲಿ ಈ ಕುರಿತು ಸಮೀಕ್ಷೆ ನಡೆಸುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಬಾವಿಗೆ ಬಿದ್ದು ತಾಯಿ-ಇಬ್ಬರು ಮಕ್ಕಳ ಸಾವು
ತುಮಕೂರು, ಜೂ. ೨೪: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಧಾರುಣ ಘಟನೆ ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಗುರುವಾರ ಜರುಗಿದೆ. ಮೃತರನ್ನು ತಿರುಮಲಪಾಳ್ಯದ ಕುಮಾರ್ ಅವರ ಪತ್ನಿ ಹೇಮಲತಾ (೩೪) ಹಾಗೂ ಮಕ್ಕಳಾದ ಮಾನಸ (೬), ಪೂರ್ವಿಕಾ (೩) ಎಂದು ಗುರುತಿಸಲಾಗಿದೆ. ಗುರುವಾರ ಕಾರ ಹುಣ್ಣಿಮೆ ನಿಮಿತ್ತ ತೋಟದಲ್ಲಿ ಮೊಸರನ್ನ ಎಡೆ ಹಾಕಲು ಹೋಗಿದ್ದರು. ಆ ಸಂದರ್ಭದಲ್ಲಿ ಮಾನಸ ಬಾವಿಯ ದಡದಲ್ಲಿದ್ದ ಸೀಬೆ ಹಣ್ಣಿನ ಮರದಲ್ಲಿ ಹಣ್ಣು ಕೀಳಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. ಈ ವೇಳೆ ಜೊತೆಯಲ್ಲಿದ್ದ ಪೂರ್ವಿಕಾಳು ಬಾವಿಗೆ ಬಿದ್ದಿದ್ದಾಳೆ. ತನ್ನಿಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ತಾಯಿ ಹೇಮಲತಾ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ್ದಾರೆ. ಆದರೆ, ದುರದೃಷ್ಟಾವಶಾತ್ ಮೂವರು ಬಾವಿಯಿಂದ ಮೇಲೆ ಬರಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.