ಗುಡ್ಡೆಹೊಸೂರು, ಜೂ. ೨೪: ಇಲ್ಲಿನ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ನಂದಿನಿ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕೋವಿಡ್ಗೆ ಸಂಬAಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅಲ್ಲದೆ ಗ್ರಾಮದ ಹಲವು ವಿಭಾಗಗಳ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಆಯಾ ಭಾಗದ ಸದಸ್ಯರು ಸಭೆಯ ಗಮನಕ್ಕೆ ತಂದರು. ಗ್ರಾಮದಲ್ಲಿ ಸರ್ವರಿಗೂ ಲಸಿಕೆ ನೀಡಲು ಕಾರ್ಯಕ್ರಮ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶೋಧ ಮತ್ತು ಮಾಜಿ ಉಪಾಧ್ಯಕ್ಷ ಮತ್ತು ಹಾಲಿ ಸದಸ್ಯ ಕುಡೆಕ್ಕಲ್ ಚಿದಾನಂದ, ಪಂಚಾಯಿತಿ ಅಧಿಕಾರಿ ಶ್ಯಾಂ ತಮ್ಮಯ್ಯ, ಇಲ್ಲಿನ ಸಿಬ್ಬಂದಿ ಸುಮ, ಸಮಂತ್ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು.