ಮಡಿಕೇರಿ, ಜೂ.೨೪: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಗುರುವಾರ ನಗರದ ಕೋಟೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಂದ ಕೋಟೆ ದುರಸ್ತಿ ಕಾಮಗಾರಿಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯ ಪುರಾತತ್ವ ಅಧೀಕ್ಷಕರಾದ ಡಾ.ಶಿವಕಾಂತ್ ಭಾಜಪೇ, ಸಹಾಯಕ ಪುರಾತತ್ವ ಅಧೀಕ್ಷಕರಾದ ಶ್ರೀಗುರು ಭಾಗಿ, ಎಂಜಿನಿಯರ್ ಕೆ.ಚಂದ್ರಕಾAತ್, ಎಡಿಎಲ್ಆರ್ ವಿರೂಪಾಕ್ಷ, ಸಹಾಯಕ ಸಂರಕ್ಷಣಾಧಿಕಾರಿ ಸುನಿಲ್ ಕುಮಾರ್ ಕೆ.ಎಂ., ತಹಶೀಲ್ದಾರ್ ಮಹೇಶ್, ಇತರರು ಇದ್ದರು.