ಮಡಿಕೇರಿ, ಜೂ. ೨೪: ಪ್ರಸ್ತುತ ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿದ್ದು, ಕೃಷಿ ಪ್ರಧಾನವಾಗಿರುವ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳತ್ತ ರೈತರು ಆಸಕ್ತಿ ತೋರುತ್ತಿದ್ದಾರೆ. ಭತ್ತದ ಕೃಷಿ ಹಾಗೂ ಮುಸುಕಿನ ಜೋಳದ ಕೃಷಿ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ರೈತರು ಮಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ ಗದ್ದೆ ಉಳುಮೆ ಸೇರಿದಂತೆ ಕೆಲಸಕ್ಕೆ ಗದ್ದೆಗಳನ್ನು ಹಸನು ಮಾಡಲಾಗುತ್ತಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ೩೦,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ೪ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆಯ ಉಪನಿರ್ದೇಶಕ ರಾಜು ಅವರು ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ. ವಿವಿಧ ರೀತಿಯ ತಳಿಗಳ ಬಿತ್ತನೆ ಬೀಜಗಳು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇರುವದಾಗಿ ಅವರು ಮಾಹಿತಿ ನೀಡಿದ್ದಾರೆ.

ಈ ತನಕ ವಿವಿಧ ರೈತ ಸಂಪರ್ಕ ಕೇಂದ್ರಗಳ ಮೂಲಕ ಸುಮಾರು ೫೦ ರಿಂದ ೬೦ ಕ್ವಿಂಟಾಲ್ ನಷ್ಟು ಭತ್ತದ ಬಿತ್ತನೆ ಬೀಜವನ್ನು ರೈತರು ಪಡೆದುಕೊಂಡಿದ್ದಾರೆ. ಈ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಮುಂದಿನ ದಿನಗಳಲ್ಲಿ ರೈತರು ಇನ್ನಷ್ಟು ಬಿತ್ತನೆ ಬೀಜವನ್ನು ಪಡೆದುಕೊಳ್ಳಲಿದ್ದಾರೆ ಎಂದು ಅವರು ಮಾಹಿತಿಯಿತ್ತರು. ಈ ವರ್ಷ ೪ ಸಾವಿರ ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದ್ದು, ಸುಮಾರು ೨೦೦ ಕೆ.ಜಿ. ಯಷ್ಟು ಬಿತ್ತನೆ ಬೀಜವನ್ನು ಪ್ರಸ್ತುತ ರೈತರು ಪಡೆದುಕೊಂಡಿದ್ದಾರೆ.

ಕಳೆದ ಸಾಲಿನಲ್ಲಿಯೂ ೩೦,೫೦೦ ಹೆಕ್ಟೇರ್‌ನಲ್ಲಿ ಭತ್ತ ಹಾಗೂ ೪ ಸಾವಿರ ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿತ್ತು. ಇದರಲ್ಲಿ ೨೩,೭೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ೩೦೫೦ ಹೆಕ್ಟೇರ್‌ನಲ್ಲಿ ಮುಸುಕಿನ ಜೋಳದ ಸಾಧನೆಯಾಗಿದೆ ಎಂದು ರಾಜು ಅವರು ವಿವರವಿತ್ತರು. ಪ್ರಸ್ತುತದ ದಿನಗಳಲ್ಲಿ ವನ್ಯಪ್ರಾಣಿಗಳ ಕಾಟ, ಹವಾಮಾನದ ವೈಪರೀತ್ಯ, ಧಾರಣೆ ಇಳಿಮುಖ ಮತ್ತಿತರ ಕಾರಣ ಗಳಿಂದಾಗಿ ರೈತರಲ್ಲಿ ಈ ಕೃಷಿಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಅಲ್ಲದೆ, ಭತ್ತದ ಗದ್ದೆಗಳು ನಿವೇಶ ನಗಳಾಗಿ ಪರಿವರ್ತನೆ ಗೊಳ್ಳುತ್ತಿರುವದೂ ಜಿಲ್ಲೆಯಲ್ಲಿ ಈ ಕೃಷಿ ಇಳಿಮುಖವಾಗಲು ಕಾರಣ ವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭತ್ತ ಸಸಿಮಡಿ ಕಾರ್ಯಕ್ಕೆ ಸಿದ್ಧತೆ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳದ ಬೆಳೆಗಳು ಪ್ರಮುಖವಾಗಿದ್ದು, ಸದ್ಯದಲ್ಲಿಯೇ ಭತ್ತ ಒಟ್ಟಲು ಪಾತಿ (ಸಸಿಮಡಿ) ಮಾಡುವ ಕಾರ್ಯಕ್ಕೆ ಕೃಷಿಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಉತ್ತಮ ಮಳೆ ಮುಂದುವರಿದಲ್ಲಿ ಶೀಘ್ರ ಸಸಿಮಡಿ ಕಾರ್ಯ ಪ್ರಾರಂಭವಾಗಲಿದೆ. ಭತ್ತ ಬಿತ್ತನೆ ಬೀಜವನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲ್ಲಿ ದಾಸ್ತಾನು ಮಾಡಲಾಗಿದ್ದು ೧ ಕೆ.ಜಿ.ಗೆ ೮ ರೂ.ಗಳ ಸಹಾಯಧನದಡಿ ಪಡೆಯಬಹುದಾಗಿದೆ.

ರೈತರು ಸಸಿಮಡಿ ಮಾಡುವ ಸಂದರ್ಭದಲ್ಲಿ ಬಿತ್ತನೆಗೆ ಮೊದಲು ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ಉಪಯೋಗಿಸುವುದು ಸೂಕ್ತವಾಗಿದೆ. ಪ್ರತಿ ಕೆ.ಜಿ. ಭತ್ತ ಬಿತ್ತನೆ ಬೀಜಕ್ಕೆ ೪ ಗ್ರಾಂ. ಬೇವಿಸ್ಟಿನ್ (ಕಾರ್ಬನ್‌ಡೈಜಿಂ) ಶಿಲೀಂಧ್ರನಾಶಕ ಪುಡಿಯನ್ನು ಬೆರೆಸಿ ಬೀಜೋಪಚಾರ ಮಾಡುವುದು ಸೂಕ್ತವಾಗಿದೆ. ರೈತರು ಬಿತ್ತನೆ ಬೀಜವನ್ನು ನೀರಿನಲ್ಲಿ ನೆನೆಸಿ ತೆಗೆದ ನಂತರ ಮೊಳಕೆಗೆ ಇಡುವ ಮೊದಲು ಬೀಜೋಪಚಾರ ಮಾಡುವುದು ಒಳಿತಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಕ್ ಅವರು ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗದ ಬಾಧೆ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಬಿತ್ತನೆಗೆ ಮೊದಲು ಕಾರ್ಬನ್‌ಡೈಜಿಂ ಶಿಲೀಂಧ್ರ ನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದು ಸೂಕ್ತವಾಗಿದೆ. ರೈತರು ಬಿತ್ತನೆ ಬೀಜವನ್ನು ೨೪ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ ಹೊರ ತೆಗೆದ ನಂತರ ನೀರನ್ನು ಬಸಿದು ಪ್ರತೀ ಒಂದು ಕೆ.ಜಿ.ಬಿತ್ತನೆ ಬೀಜಕ್ಕೆ ೪ ಗ್ರಾಂ.ನAತೆ ಕಾರ್ಬನ್‌ಡೈಜಿಂ ಶಿಲೀಂಧ್ರ ನಾಶಕವನ್ನು ಚೆನ್ನಾಗಿ ಮಿಶ್ರಮಾಡಿ ನೆರಳಿನಲ್ಲಿ ಒಣಗಿಸಿ ನಂತರ ಮೊಳಕೆಗೆ ಇಟ್ಟು ಮೊಳಕೆ ಬಂದ ನಂತರ ಸಸಿಮಡಿಯಲ್ಲಿ ಬಿತ್ತನೆ ಮಾಡುವುದು. ಹೀಗೆ ಮಾಡುವು ದರಿಂದ ಬೀಜದಿಂದ ಬರುವ ಬೆಂಕಿ ರೋಗವನ್ನು ತಡೆಯಬಹುದಾಗಿದೆ.

ದೀರ್ಘಾವಧಿ ತಳಿಗಳಾದ ಇಂಟಾನ್, ತುಂಗಾ, ಅತಿರ, ಬಿ.ಆರ್.೨೬೫೫, ತನು ತಳಿ ಭತ್ತಗಳನ್ನು ಜೂನ್ ೧೫ ರಿಂದ ೨೫ ರ ಒಳಗೆ ಬಿತ್ತನೆ ಮಾಡುವುದು. ಮಧ್ಯಮಾವಧಿ ತಳಿಗಳಾದ ಐ.ಇ.ಟಿ.೭೧೯೧, ಜಯ, ಎಂ.ಟಿ.ಯು ೧೦೦೧ ತಳಿಗಳನ್ನು ಜೂನ್ ೪ ನೇ ವಾರದಲ್ಲಿ ಬಿತ್ತನೆ ಮಾಡುವುದು. ಅಲ್ಪಾವಧಿ ತಳಿಗಳಾದ ಐ.ಆರ್.೬೪, ಹೈಬ್ರೀಡ್ ಭತ್ತಗಳನ್ನು ಜುಲೈ ಮೊದಲನೇ ವಾರದಲ್ಲಿ ಬಿತ್ತನೆಗೆ ಬಳಸುವುದು ಸೂಕ್ತವಾಗಿದೆ.

ಜಿಲ್ಲೆಯ ಎರಡನೇ ಪ್ರಮುಖ ಬೆಳೆಯಾದ ಮುಸುಕಿನ ಜೋಳ ೪ ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ ಈಗಾಗಲೇ ಸುಮಾರು ೬೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯವಾಗಿದ್ದು, ಉಳಿದಂತೆ ಬಿತ್ತನೆ ಕಾರ್ಯ ಮುಂದುವರೆದಿದೆ. ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಪ್ರತಿ ಕೆ.ಜಿ.ಗೆ ೨೦ ರೂ.ಗಳ ಸಹಾಯಧನದಡಿ ವಿತರಣೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಮುಸುಕಿನ ಜೋಳ ಸಂಬAಧಿಸಿದAತೆ ಗಂಗಾ ಕಾವೇರಿ ೩೧೬೪, ಸಿಪಿ ೮೧೮, ಕಾವೇರಿ ೨೫ಕೆ೫೫ ತಳಿ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗುತ್ತದೆ ಉಪ ನಿರ್ದೇಶಕ ರಾಜು ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಾಗಿ ಬೇಕಿರುವ ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಮತ್ತು ಎಸ್‌ಎಸ್‌ಪಿ ಸೇರಿ ಒಟ್ಟು ೧೯,೯೮೫ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

ಫಸಲ್ ಭೀಮಾ ಯೋಜನೆ ಹೆಸರು

ಕೇಂದ್ರ ಸರ್ಕಾರವು ೨೦೨೦-೨೧ನೇ ಸಾಲಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದ್ದು, ಅದರಂತೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸ ಲಾಗುತ್ತಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ.

ಮುಖ್ಯ ಬೆಳೆಗೆ ಯೋಜನೆಯನ್ನು ಗ್ರಾ.ಪಂ. ಮಟ್ಟಕ್ಕೆ ಅಳವಡಿಸ ಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸ ಲಾಗುವುದು. ಬೆಳೆ ವಿಮಾ ನಷ್ಟ ಪರಿಹಾರವನ್ನು ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆಯಡಿ ಇಂದಿನ ೭ ವರ್ಷಗಳ ಇಳುವರಿ ಮಾಹಿತಿಯಲ್ಲಿ ಉತ್ತಮ ೫ ವರ್ಷಗಳ ಇಳುವರಿ ಮಾಹಿತಿ ಪರಿಗಣಿಸಿ ಲೆಕ್ಕಹಾಕಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ಭಾರತಿ ಆಕ್ಸ (ಃhಚಿಡಿಚಿಣhi ಂxಚಿ) ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಲಭ್ಯವಿದ್ದು, ಜುಲೈ ೩೧ ರೊಳಗೆ ಮಳೆಯಾಶ್ರಿತ ಮುಸುಕಿನ ಜೋಳ ಹಾಗೂ ಆಗಸ್ಟ್ ೧೬ ರೊಳಗೆ ಭತ್ತ ಬೆಳೆಗಳಿಗೆ ಈ ಯೋಜನೆಯಡಿ ಅರ್ಜಿಯನ್ನು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಸಲ್ಲಿಸಿ ನೋಂದಾಯಿಸಬಹುದಾಗಿದೆ. ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ್ ಭತ್ತ (ನೀರಾವರಿ) ಬೆಳೆಗೆ ರೂ. ೮೬,೦೦೦, ಭತ್ತ (ಮಳೆಯಾಶ್ರಿತ) ಬೆಳೆಗೆ ರೂ. ೫೫,೦೦೦ ಹಾಗೂ ಮಳೆಯಾಶ್ರಿತ ಮುಸುಕಿನ ಜೋಳ ಬೆಳೆಗೆ ರೂ. ೫೦,೦೦೦ ಗಳು ವಿಮಾ ಮೊತ್ತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಃhಚಿಡಿಚಿಣhi ಂxಚಿ ವಿಮಾ ಕಂಪನಿಯ ಪ್ರತಿನಿಧಿಗಳಾದ ಬೊಳ್ಳಜಿರ ಅಯ್ಯಪ್ಪ ವೀರಾಜಪೇಟೆ ದೂ.ಸಂಖ್ಯೆ ೯೮೮೦೭೭೮೦೪೭, ಮಂಜುನಾಥ ಸೋಮವಾರಪೇಟೆ ದೂ.ಸಂಖ್ಯೆ ೯೪೪೮೭೬೫೨೭೯, ಶಂಕರ್ ಮಡಿಕೇರಿ ದೂ.ಸಂಖ್ಯೆ ೯೫೯೦೯೨೮೮೮೬, ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವುದು. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗಪಡಿಸಿಕೊಳ್ಳುವಂತೆ ಶಬನಾ ಎಂ.ಷೇಕ್ ಅವರು ಕೋರಿದ್ದಾರೆ.