ಮಡಿಕೇರಿ, ಜೂ. ೨೩: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕೊಡಗು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷರಾಗಿ ವಿಲ್‌ಫ್ರೆಡ್ ಕ್ರಾಸ್ತಾ, ಉಪಾಧ್ಯಕ್ಷರಾಗಿ ಇ. ಸುಲೇಮಾನ್, ಕಾರ್ಯದರ್ಶಿಯಾಗಿ ಕೆ.ಯು. ರಂಜಿತ್ ಹಾಗೂ ಖಜಾಂಚಿಯಾಗಿ ಸುನಿಲ್ ಅವರುಗಳನ್ನು ನೇಮಕ ಮಾಡಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕಾತಿ ಮಾಡಿ ಸಮಿತಿಯ ರಾಜ್ಯ ಕಾರ್ಯದರ್ಶಿ ಈ. ಬಸವರಾಜು ಆದೇಶ ಹೊರಡಿಸಿದ್ದಾರೆ.