ಮಡಿಕೇರಿ, ಜೂ. ೨೩: ಮಳೆಯಿಂದ ಹಾನಿಯಾದ ಹೆದ್ದಾರಿ ಬದಿಯಲ್ಲಿ ತಡೆಗೋಡೆ ನಿರ್ಮಿಸುವ ಸಂಬAಧ ಹೆಚ್ಚುವರಿ ಅನುದಾನಕ್ಕೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು.

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ತಡೆಗೋಡೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು, ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಕಾಮಗಾರಿ ಸಂಬAಧ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಮಾಹಿತಿ ಪಡೆದುಕೊಂಡರು.

ಕಳೆದ ಮೂರು ವರ್ಷದ ಹೆದ್ದಾರಿ ಬದಿಯ ೧೮ ಮಳೆಹಾನಿ ಕಾಮಗಾರಿಗೆ ಈಗಾಗಲೇ ರೂ. ೫೦ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ರೂ. ೫೦ ರಿಂದ ೧೦೦ ಕೋಟಿಯ ಅನುದಾನದ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಬಳಿಕ ಅನುದಾನಕ್ಕೆ ತಾನು ಪ್ರಯತ್ನಿಸುತ್ತೇನೆ ಎಂದು ಪ್ರತಾಪ್ ಸಿಂಹ ಭರವಸೆ ನೀಡಿದರು.

ಶಾಸಕ ಕೆ.ಜಿ. ಬೋಪಯ್ಯ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್, ಗುತ್ತಿಗೆದಾರ ಶರೀನ್, ಜಗದೀಶ್ ರೈ ಸೇರಿದಂತೆ ಇನ್ನಿತರರು ಹಾಜರಿದ್ದರು.