ಮಡಿಕೇರಿ, ಜೂ. ೨೩: ರಾಜ್ಯದ ಉನ್ನತ ಶಿಕ್ಷಣದ ಕಲಿಕೆ ಹಾಗೂ ಬೋಧನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಾಗಿ ರಾಜ್ಯ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸ್ಮಾರ್ಟ್ ತರಗತಿಗಳಿಗೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ರೂ. ೧.೫೫ ಲಕ್ಷ ವೆಚ್ಚದ ಟ್ಯಾಬ್ ವಿತರಿಸಲಾಗುತ್ತಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅವರು ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಸ್ಮಾರ್ಟ್ ತರಗತಿಗಳಿಗೆ ಚಾಲನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು. ತಂತ್ರಜ್ಞಾನದ ಜಗತ್ತಿನಲ್ಲಿ ಡಿಜಿಟಲ್ ವ್ಯವಸ್ಥೆ ಪ್ರಮುಖವಾಗಿದೆ. ಅವುಗಳನ್ನು ಉತ್ತಮ ಉದ್ದೇಶಕ್ಕಾಗಿ ಬಳಸಿ ಕೊಳ್ಳಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹೇಳಿದರು.
ಕೋವಿಡ್-೧೯ ಮಹಾಮಾರಿ ಸಂದರ್ಭದಲ್ಲಿ ಶಾಲಾ-ಕಾಲೇಜುಗಳು ತೆರೆಯಲು ಸಾಧ್ಯವಾಗಿಲ್ಲ. ವಿದ್ಯಾರ್ಥಿ ತಂತ್ರಜ್ಞಾನದ ಜಗತ್ತಿನಲ್ಲಿ ಡಿಜಿಟಲ್ ವ್ಯವಸ್ಥೆ ಪ್ರಮುಖವಾಗಿದೆ. ಅವುಗಳನ್ನು ಉತ್ತಮ ಉದ್ದೇಶಕ್ಕಾಗಿ ಬಳಸಿ ಕೊಳ್ಳಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹೇಳಿದರು.
ಕೋವಿಡ್-೧೯ ಮಹಾಮಾರಿ ಸಂದರ್ಭದಲ್ಲಿ ಶಾಲಾ-ಕಾಲೇಜುಗಳು ತೆರೆಯಲು ಸಾಧ್ಯವಾಗಿಲ್ಲ. ವಿದ್ಯಾರ್ಥಿ ಕಲಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ. ಸರ್ಕಾರಿ ಶಾಲಾ ಕಾಲೇಜುಗಳು ಖಾಸಗಿ ಶಾಲಾ ಕಾಲೇಜುಗಳಿಗಿಂತ ಉತ್ತಮ ಶಿಕ್ಷಣ ನೀಡುತ್ತಿವೆ ಎಂದು ಅವರು ಹೇಳಿದರು. ಟ್ಯಾಬ್ಗಳನ್ನು ಪಡೆದ ವಿದ್ಯಾರ್ಥಿಗಳು ಅವುಗಳನ್ನು ಉತ್ತಮ ಉದ್ದೇಶಕ್ಕಾಗಿ ಹಾಗೂ ಶಿಕ್ಷಣಕ್ಕಾಗಿ
(ಮೊದಲ ಪುಟದಿಂದ) ಉಪಯೋಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಪೋಷಕರಿಗೆ, ಶಾಲಾ-ಕಾಲೇಜುಗಳಿಗೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಆಶಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಚಿತ್ರಾ ಅವರು ಮಾತನಾಡಿ ಕೋವಿಡ್-೧೯ ಮಹಾಮಾರಿ ಸಂದರ್ಭದಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮಕ್ಕಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಕಾಲೇಜಿನ ಕೆಲವು ತರಗತಿಗಳನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆ ಮಾಡಲಾಗಿದೆ. ಟ್ಯಾಬ್ಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ತಂತ್ರಜ್ಞಾನ ಅಳವಡಿಸಲಾಗಿದೆ ಎಂದು ಅವರು ಹೇಳಿದರು. ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಮೂಲಕ ಸರ್ಕಾರ ವಿಶಾಲ ದೃಷ್ಟಿಕೋನ ಇಟ್ಟುಕೊಂಡಿದೆ. ದೇಶವನ್ನು ಸದೃಢಗೊಳಿಸಬೇಕು. ಮತ್ತು ವಿದ್ಯಾರ್ಥಿಗಳನ್ನು ಬಲಿಷ್ಠಗೊಳಿಸಬೇಕು ಎಂಬ ಉದ್ದೇಶದಿಂದ ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.
ನುರಿತ ಉಪನ್ಯಾಸಕರಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ನೀಡಿರುವ ಟ್ಯಾಬ್ಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು. ವಿದ್ಯಾರ್ಥಿನಿ ದರ್ಶಿನಿ ಪ್ರಾರ್ಥಿಸಿದರು. ಪ್ರಾಧ್ಯಾಪಕ ಡಾ. ದಯಾನಂದ ಕೆ.ಸಿ. ಸ್ವಾಗತಿಸಿ, ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ವಂದಿಸಿದರು. ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.