ಮಡಿಕೇರಿ, ಜೂ.೨೪: ಕೋವಿಡ್ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ತ್ವರಿತ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಅಲೆ ಮುನ್ನೆಚ್ಚರಿಕೆ ಮತ್ತು ಪೂರ್ವಭಾವಿ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೋವಿಡ್-೧೯ ಪ್ರಕರಣಗಳು ಎಷ್ಟು ಮಂದಿ ಮಕ್ಕಳಲ್ಲಿ ಕಂಡುಬAದಿದೆ ಹಾಗೂ ಎಷ್ಟು ಮಂದಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಕೋವಿಡ್ ಪಾಸಿಟಿವಿಟಿ ಕಂಡುಬAದಲ್ಲಿ ಹೆಚ್ಚಿನ ನಿಗಾವಹಿಸಬೇಕು. ಆಮ್ಲಜನಕ ಅವಶ್ಯವಿರುವ ಮಕ್ಕಳಿಗೆ ತಾಲೂಕು ಆಸ್ಪತ್ರೆಗಳಿಗೆ ದಾಖಲು ಮಾಡಿಸಬೇಕು. ಉಳಿದಂತೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಮಕ್ಕಳನ್ನು ದಾಖಲಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಸಂಬAಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ವಿಕಲಚೇತನ ಮಕ್ಕಳ ಕಡೆ ಹೆಚ್ಚಿನ ಗಮನಹರಿಸಬೇಕು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮಕ್ಕಳಿಗೆ ಅಗತ್ಯವಿರುವ ಪೌಷ್ಠಿಕ ಆಹಾರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಲೋಪದೋಷವಾಗದಂತೆ ಕ್ರಮವಹಿಸಬೇಕು. ಮಕ್ಕಳಿಗಾಗಿಯೇ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸಿಯು ಹಾಸಿಗೆ ಹಾಗೂ ಆಮ್ಲಜನಕ ಹಾಸಿಗೆಗಳನ್ನು ಕಾಯ್ದಿರಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮಕ್ಕಳ ತಜ್ಞ ಡಾ.ನವೀನ್ ಕುಮಾರ್ ಮಾತನಾಡಿ, ಮೊದಲ ಅಲೆಯಲ್ಲಿ ಶೇ.೪ ರಷ್ಟು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಂಡುಬAದಿದ್ದು, ಹಾಗೆಯೇ ಎರಡನೇ ಅಲೆಯಲ್ಲಿ ಶೇ.೧೦ ರಿಂದ ೧೨ ರಷ್ಟು ಮಕ್ಕಳಿಗೆ ಪಾಸಿಟಿವ್ ಕಂಡುಬAದಿದೆ. ಹಾಗಾಗಿ ಮೂರನೇ ಅಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಂಡುಬರುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಜಿಲ್ಲೆಯ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕಿರಿಯ ಆರೋಗ್ಯ ಸಹಾಯಕಿಯರಿಗೆ ಮಕ್ಕಳಲ್ಲಿ ಕಂಡು ಬರುವ ಕೋವಿಡ್ ಲಕ್ಷಣಗಳ ಬಗ್ಗೆ ತುರ್ತಾಗಿ ತರಬೇತಿ ನೀಡಿ ಕೋವಿಡ್-೧೯ ೩ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ ಎಂದರು.

ನ್ಯಾಷನಲ್ ಇನ್ಸ್ಟ್ಯೂಷನ್ ಆಫ್ ನ್ಯೂಟ್ರೀಷನ್ ಅವರು ಈಗಾಗಲೇ ಮಕ್ಕಳಿಗೆ ಯಾವ ರೀತಿಯ ಪೌಷ್ಠಿಕ ಆಹಾರವನ್ನು ಒದಗಿಸಬೇಕು ಎಂಬುದರ ಬಗ್ಗೆ ಮಾರ್ಗಸೂಚಿಯನ್ನು ನೀಡಿದ್ದು, ಅದೇ ರೀತಿಯಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಬಹುದಾಗಿದೆ ಎಂದು ಡಾ.ನವೀನ್ ತಿಳಿಸಿದರು.

ಡಾ.ಮಹೇಶ್ ಮಾತನಾಡಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕಿರಿಯ ಆರೋಗ್ಯ ಸಹಾಯಕರು ದಿನಕ್ಕೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಮಕ್ಕಳಿಗಾಗಿಯೇ ಕೋವಿಡ್ ಆಸ್ಪತ್ರೆಯಲ್ಲಿ ೫೦ ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳಬೇಕಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಕೋವಿಡ್ ಪಾಸಿಟಿವ್ ಬಂದ ಮಕ್ಕಳ ಜೊತೆ ಅವರ ಪೋಷಕರು ಇರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಕ್ಕಳ ಜೊತೆ ಆಸ್ಪತ್ರೆಯಲ್ಲಿ ಇರುವ ಪೋಷಕರಿಗೆ ಪಿಪಿ ಕಿಟ್ ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕಿದೆ ಎಂದರು.

ಕೋವಿಡ್ ಆರೈಕೆ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಪೋಷಕರಿಗೆ ಆರೈಕೆ ಕೇಂದ್ರದಲ್ಲಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪೋಷಕರು ಇರಲು ವ್ಯವಸ್ಥೆ ಮಾಡಬೇಕು ಎಂದು ಸಲಹೆ ಮಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀಕ್ಷಕ ಡಾ.ಮಂಜುನಾಥ್, ಮಕ್ಕಳ ತಜ್ಞ ಡಾ.ಪುರುಷೋತ್ತಮ, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಡಾ.ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ವಿ.ಸುರೇಶ್ ಅವರು ಹಲವು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಆಡಳಿತಾಧಿಕಾರಿ ನಂಜುAಡೇಗೌಡ, ಡಾ.ಪ್ರದೀಪ್, ಡಾ.ವಿಶಾಲ್ ಕುಮಾರ್ ಇತರರು ಇದ್ದರು.