*ವೀರಾಜಪೇಟೆ, ಜೂ. ೨೫: ವೀರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ನಾಯಕಂಡ ಪವನ್ (೩೭) ತಾ. ೨೫ ರಂದು ಬೆಳಿಗ್ಗೆ ತನ್ನ ಮನೆಯ ಹಿಂದೆ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ಅವರನ್ನು ನೋಡಿಕೊಳ್ಳಲು ಯಾರು ಇಲ್ಲ ಎನ್ನುವ ಬೇಸರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಕುಟುಂಬದ ಮೂಲಗಳು ತಿಳಿಸಿವೆ. ಬಳಿಕ ಶವವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹವನ್ನು ಒಪ್ಪಿಸಲಾಯಿತು.