ಮ.ಜೂ.೨೫; ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುವದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ಹಾಗೂ ಮಡಿಕೇರಿ ನಗರ ಠಾಣೆ ವತಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ನಗರದ ಸಾರಿಗೆ ಬಸ್ ನಿಲ್ದಾಣ ಹಾಗೂ ಮಂಗೇರಿರ ಮುತ್ತಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರ ಠಾಣಾಧಿಕಾರಿ ಅಂತಿಮ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಹಾಗೂ ಮಾರಾಟ ಮಾಡುವದರಿಂದ ಎದುರಿಸಬೇಕಾದ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತು ಸಮಾಜ ನಿರ್ಮಾಣ ಮಾಡುವಲ್ಲಿ ಪೊಲೀಸರೊಂದಿಗೆ ಕೈ ಜೋಡಿಸುವಂತೆ ಕರೆ ನೀಡಿದರು. ನಗರ ಠಾಣಾ ಸಿಬ್ಬಂದಿಗಳು ಹಾಜರಿದ್ದರು.