ಮಡಿಕೇರಿ, ಜೂ.೨೫: ಜಿಲ್ಲೆಯಲ್ಲಿ ಶುಕ್ರವಾರ ೧೭೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೭೨, ಸೋಮವಾರಪೇಟೆ ತಾಲೂಕಿನಲ್ಲಿ ೭೭, ವೀರಾಜಪೇಟೆ ತಾಲೂಕಿನಲ್ಲಿ ೨೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೮,೭೧೮ ಆಗಿದ್ದು, ಒಟ್ಟು ೨೭,೨೭೧ ಮಂದಿ ಗುಣಮುಖರಾಗಿದ್ದಾರೆ. ೧೦೮೪ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ೩೬೩ ಮರಣ ಪ್ರಕರಣಗಳು ವರದಿ ಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೮.೦೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.