ಮಡಿಕೇರಿ, ಜೂ.೨೫ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್‌ನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿತರಿಸಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಸುರಕ್ಷಾ ಕಿಟ್ ವಿತರಣೆ ಮಾಡಲಾಯಿತು.

ಬಳಿಕ ಮಾತನಾಡಿದ ೩೭ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗಿದೆ. ಒಟ್ಟು ೧೨೯ ಜನರಿಗೆ ಹಂತ ಹಂತವಾಗಿ ಸುರಕ್ಷಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕೋವಿಡ್-೧೯ ಮುಂಜಾಗ್ರತಾ ಕ್ರಮವಾಗಿ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ. ಜನರು ಸಹಕರಿಸಬೇಕು ಎಂದು ಕೋರಿದರು. ಕೋವಿಡ್ ಹಿನ್ನೆಲೆ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಎಲ್ಲಾ ರೀತಿಯ ಅಗತ್ಯ ನೆರವು ನೀಡಲು ಮುಂದಾಗಿದೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದರು.