ಮಡಿಕೇರಿ, ಜೂ.೨೫: ಜೀವವಿದ್ದರೆ ಮಾತ್ರ ಜೀವನ ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಆರೋಗ್ಯದ ಕಡೆ ಜಾಗ್ರತೆ ವಹಿಸಬೇಕು. ಕೋವಿಡ್-೧೯ ಮಹಾಮಾರಿಯ ವಿರುದ್ದ ಹೋರಾಡಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ಹೇಳಿದರು. ನಗರದ ಕೂರ್ಗ್ ಕಮ್ಯೂನಿಟಿ ಸಭಾಂಗಣದಲ್ಲಿ ಛಾಯಾ ಗ್ರಾಹಕರಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿದರು.
ಕೋವಿಡ್-೧೯ ಮಹಾಮಾರಿ ಸಂದರ್ಭದಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಂತಹವರಿಗೆ ಹೊರಬಾರದು. ಪ್ರತಿಯೊಬ್ಬರು ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಸಬೇಕು ಎಂದು ಅವರು ಹೇಳಿದರು.
ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಮಾವಟ್ಕರ್, ಉಪಾಧ್ಯಕ್ಷ ಜನಾರ್ಧನ, ಕಾರ್ಯದರ್ಶಿ ದೀಪಕ್ ಕುಮಾರ್, ವೀರಾಜಪೇಟೆ ತಾಲೂಕು ದಕ್ಷಿಣ ಕೊಡಗು ಛಾಯಾ ಗ್ರಾಹಕರ ಸಂಘದ ಅಧ್ಯಕ್ಷ ರವೀಂದ್ರ ಕುಮಾರ್, ಸೋಮವಾರಪೇಟೆ ತಾಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸುಬ್ರಹ್ಮಣಿ, ಕೊಡಗು ಜಿಲ್ಲಾ
ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸರ್ವ ಪದಾಧಿಕಾರಿ ಇತರರು ಇದ್ದರು.