*ಸಿದ್ದಾಪುರ ಜೂ.೨೫ : ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಅಭ್ಯತ್ ಮಂಗಲದ ಜ್ಯೋತಿ ನಗರದಲ್ಲಿ ಇದೇ ಮೊದಲ ಬಾರಿಗೆ ೨೫ ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಈ ಬಡಾವಣೆ ಇಲ್ಲಿಯವರೆಗೆ ಸೋಂಕು ಮುಕ್ತವಾಗಿತ್ತು. ಆದರೆ ಎರಡು ದಿನ ನಡೆಸಿದ ಪರೀಕ್ಷೆಯ ಮೂಲಕ ಸೋಂಕಿತರು ಪತ್ತೆಯಾಗಿದ್ದು, ಬಡಾವಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿದ್ದರು.
ಸೀಲ್‌ಡೌನ್ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು ನಾವೆಲ್ಲರೂ ಬಡ ಕೂಲಿ ಕಾರ್ಮಿಕರಾಗಿದ್ದು, ನಮಗೆ ಆಹಾರ ಸಾಮಾಗ್ರಿ ತಂದು ಕೊಡುವವರು ಯಾರು ಎಂದು ಪ್ರಶ್ನಿಸಿದರು.