ಕೂಡಿಗೆ, ಜೂ. ೨೫: ಹೆಬ್ಬಾಲೆ ಗ್ರಾಮದ ಮುಖ್ಯ ರಸ್ತೆ ಮತ್ತು ಉಪ ರಸ್ತೆಗಳ ಕಾಮಗಾರಿಯು ಲೋಕೋಪಯೋಗಿ ಇಲಾಖೆಯ ವತಿಯಿಂದ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕಾಮಗಾರಿ ಪರಿಶೀಲನೆ ನಡೆಸಿದರು.
ಉತ್ತಮವಾದ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸುವ ಮೂಲಕ ಗುಣಮಟ್ಟದ ಕಾಮಗಾರಿ ಯನ್ನು ನಡೆಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಸೋಮವಾರಪೇಟೆ ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಮನು ರೈ, ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷ ಜಗದೀಶ್ ಸೇರಿದಂತೆ ಗ್ರಾಮದ ಪ್ರಮುಖ ಹಾಜರಿದ್ದರು.