ಮಡಿಕೇರಿ, ಜೂ.೨೫: ಪ್ರಸಕ್ತ(೨೦೨೧-೨೨) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ ೬ ಪ್ರೌಢ ಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್ಸಿಐ ನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ ೩೦ ರಂದು ಸಂಜೆ ೪ ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ : ೯೪೪೮೯೯೯೩೪೪, ೯೪೪೮೯೯೯೪೦೦ ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.