ಕ್ರೀಡಾಪಟುಗಳಿಗೆ ತಲಾ ರೂ. ೧೦ ಲಕ್ಷ ಪ್ರೋತ್ಸಾಹಧನ
ಬೆಂಗಳೂರು, ಜೂ. ೨೬: ಟೋಕಿಯೋ ಒಲಿಂಪಿಕ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. ೧೦ ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. ೨೦೨೦ರ ಒಲಿಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ ೨೩ ರಿಂದ ಸೆಪ್ಟೆಂಬರ್ ೫ ರವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬAಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ. ರಾಜ್ಯದ ಈಕ್ವೆಸ್ಟಿçಯನ್ ಕ್ರೀಡಾಪಟು ಒಲಿಂಪಿಕ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾಗೆ ೧೧೫ ಬಲಿ ಬೆಂಗಳೂರಿನಲ್ಲಿ ೯೫೫ ಸೇರಿ ೪,೨೭೨ ಪ್ರಕರಣ ಪತ್ತೆ!
ಬೆಂಗಳೂರು, ಜೂ. ೨೬: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದ್ದು ೪,೨೭೨ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೮,೩೧,೦೨೬ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೪,೬೫೪ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು ೯೫೫ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೧೦,೬೪೨ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ೧೬ ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ ೬,೧೨೬ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೬,೯೧,೧೨೩ಕ್ಕೆ ಏರಿಕೆಯಾಗಿದೆ. ಇನ್ನು ೧,೦೫,೨೨೬ ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೬೫,೦೧೦ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೪,೨೭೨ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೨.೫೮ಕ್ಕೆ ಇಳಿದಿದೆ.ಕೊಡಗಿನ ಗಡಿಯಾಚೆ
ಕ್ರೀಡಾಪಟುಗಳಿಗೆ ತಲಾ ರೂ. ೧೦ ಲಕ್ಷ ಪ್ರೋತ್ಸಾಹಧನ
ಬೆಂಗಳೂರು, ಜೂ. ೨೬: ಟೋಕಿಯೋ ಒಲಿಂಪಿಕ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. ೧೦ ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. ೨೦೨೦ರ ಒಲಿಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ ೨೩ ರಿಂದ ಸೆಪ್ಟೆಂಬರ್ ೫ ರವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬAಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ. ರಾಜ್ಯದ ಈಕ್ವೆಸ್ಟಿçಯನ್ ಕ್ರೀಡಾಪಟು ಒಲಿಂಪಿಕ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾಗೆ ೧೧೫ ಬಲಿ ಬೆಂಗಳೂರಿನಲ್ಲಿ ೯೫೫ ಸೇರಿ ೪,೨೭೨ ಪ್ರಕರಣ ಪತ್ತೆ!
ಬೆಂಗಳೂರು, ಜೂ. ೨೬: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದ್ದು ೪,೨೭೨ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೮,೩೧,೦೨೬ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೪,೬೫೪ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು ೯೫೫ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೧೦,೬೪೨ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ೧೬ ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ ೬,೧೨೬ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೬,೯೧,೧೨೩ಕ್ಕೆ ಏರಿಕೆಯಾಗಿದೆ. ಇನ್ನು ೧,೦೫,೨೨೬ ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೬೫,೦೧೦ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೪,೨೭೨ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೨.೫೮ಕ್ಕೆ ಇಳಿದಿದೆ.