ಮಡಿಕೇರಿ, ಜೂ. ೨೬: ಕೊಡಗು ರೆಡ್‌ಕ್ರಾಸ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೊಡಗು ಆರೋಗ್ಯ ಇಲಾಖೆಗೆ ೩ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಗಳು, ೭೦ ಆಕ್ಸಿಮೀಟರ್‌ಗಳನ್ನು ನೀಡಲಾಯಿತು.

ಅಮೇರಿಕಾದಲ್ಲಿ ನೆಲಸಿರುವ ಅನಿವಾಸಿ ಭಾರತೀಯರು ಭಾರತೀಯ ರೆಡ್‌ಕ್ರಾಸ್ ಮೂಲಕ ನೀಡಿರುವ ಸುಮಾರು ರೂ. ೧.೫೦ ಲಕ್ಷ ಮೌಲ್ಯದ ೩ ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಹಸ್ತಾಂತರಿಸಲಾಯಿತು.

ರೆಡ್‌ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಪ್ರತಿಕ್ರಿಯಿಸಿ, ಈ ಕಾನ್ಸನ್‌ಟ್ರೇಟರ್‌ಗಳನ್ನು ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕೋರಿದ ಹಿನ್ನೆಲೆ ಜಿಲ್ಲಾಧಿಕಾರಿ ಈ ನಿಟ್ಟಿನಲ್ಲಿ ಸ್ಪಂದಿಸಿರುವುದಾಗಿ ತಿಳಿಸಿದರು. ರೆಡ್‌ಕ್ರಾಸ್ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಮುರಳೀಧರ್, ಉಪಾಧ್ಯಕ್ಷ ಅನಿಲ್ ಎಚ್.ಟಿ., ನಿರ್ದೇಶಕ ಎಂ. ಧನಂಜಯ್, ಜಾದೂಗಾರ್ ವಿಕ್ರಂ ಶೆಟ್ಟಿ ಹಾಜರಿದ್ದರು.