ಸೋಮವಾರಪೇಟೆ, ಜೂ. ೨೬: ತಾಲೂಕಿನ ಮಾದಾಪುರದ ಸಂತೆ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಾದಾಪುರದ ಸಂತೆ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿ ನಿವಾಸಿ ರಾಮಚಂದ್ರ ಎಂಬಾತನನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯಿಂದ ೬೦ ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳ ಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ ಕಾರ್ಯಾ ಚರಣೆಯಲ್ಲಿ ಭಾಗವಹಿಸಿದ್ದರು.