ಮಡಿಕೇರಿ, ಜೂ. ೨೬: ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಮರಂದೋಡ, ಚೇಲಾವರ, ಕೋಕೇರಿ, ನರಿಯಂದಡ, ಕರಡ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ. ೨೭ ರಂದು (ಇಂದು) ನಡೆಯಲಿದೆ.
ಪಂಚಾಯಿತಿ ಹಾಗೂ ಸಾರ್ವಜನಿಕರ ಕೋರಿಕೆಯ ಮೇರೆಗೆ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಶಾಲಾ ಮಕ್ಕಳು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸ ಬೇಕೆಂದು ಕೋರಲಾಗಿದೆ.