ಸೋಮವಾರಪೇಟೆ,ಜೂ.೨೬: ಕೊಡಗಿನಲ್ಲಿ ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಅಧಿಕ ಭಾರ ಸಾಗಾಟ ಮಾಡುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘಿಸಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾದಾಪುರ ವ್ಯಾಪ್ತಿಯಿಂದ ಸೋಮವಾರಪೇಟೆ ಮಾರ್ಗವಾಗಿ ಚಿಕ್ಕಮಗಳೂರಿಗೆ ಸಿಲ್ವರ್ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಸೋಮವಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಹಾಗೂ ಸಿಬ್ಬಂದಿಗಳು, ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪದ ಮೇರೆ ಕಾನೂನು ಕ್ರಮ ಜರುಗಿಸಿದ್ದಾರೆ.