ಕೂಡಿಗೆ, ಜೂ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಕಿರು ನಾಲೆಯ ಹೂಳು ತೆಗೆಯವ ಕಾರ್ಯ ನಡೆಯುತ್ತಿದೆ. ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ವಿವಿಧ ಉಪ ಕಾಮಗಾರಿ ಗಳನ್ನು ಕೈಗೊಳ್ಳುವ ಅವಕಾಶವಿದ್ದು, ಗ್ರಾಮದ ರೈತರ ಕಣಗಳ ನಿರ್ಮಾಣ, ಉಪ ರಸ್ತೆಗಳು ಚರಂಡಿಗಳು ಮತ್ತು ತಡೆಗೋಡೆ ನಿರ್ಮಾಣ ಮಾಡುವುದು ಸೇರಿದಂತೆ ಹಲವು ಅವಕಾಶವಿದ್ದು, ಇದರ ಸದುಪಯೋಗಪಡಿಸಿಕೊಳ್ಳಲು ಗ್ರಾಮಸ್ಥರು ಉದ್ಯೋಗ ಖಾತ್ರಿ ನೋಂದಣಿ ಮಾಡಿಸಿಕೊಳ್ಳುವಂತೆ ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಮನವಿ ಮಾಡಿದ್ದಾರೆ.