ಮಡಿಕೇರಿ, ಜೂ.೨೬ : ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ದಾಖಲಾಗಿದ್ದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ಸೇರಿದಂತೆ ಇನ್ನಿತರ ಒಟ್ಟು ೨೧ ಕೆ.ಜಿ ಯಷ್ಟು ಮಾದಕ ವಸ್ತುಗಳನ್ನು ನಾಶ ಪಡಿಸಲಾಗಿದೆ.

ನಿಗದಿತ ಮಾರ್ಗಸೂಚಿಯನುಸಾರ ಹಾಸನ ನಗರದ ವಿ.ವಿ. ಇನ್ಸಿನ್ ಸಲ್ಯೂಷಿನ್ ಪ್ರೆöÊವೆಟ್ ಲಿಮಿಟೆಡ್ ಸಂಸ್ಥೆಯ ಘಟಕದಲ್ಲಿ ಸ್ಥಾಪಿಸಲಾಗಿರುವ ಕುಲುಮೆಯಲ್ಲಿ ಅಂತರಾಷ್ಟಿçÃಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನದಂದು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿ ಸಮ್ಮುಖದಲ್ಲಿ ನಾಶಪಡಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಮಡಿಕೇರಿ ಡಿವೈಎಸ್‌ಪಿ ದಿನೇಶ್, ಡಿಸಿಆರ್‌ಬಿ ಇನ್ಸ್ಪೆಕ್ಟರ್ ಕುಮಾರ್ ಆರಾಧ್ಯ ಹಾಜರಿದ್ದರು.