ಸಿದ್ದಾಪುರ, ಜೂ. ೨೬: ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದAತೆ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಈಗಾಗಲೇ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ತಿಳಿಸಿದರು.
‘ಶಕ್ತಿ’ಗೆ ಈ ಕುರಿತು ಮಾಹಿತಿ ನೀಡಿದ ಅವರು, ವೀರಾಜಪೇಟೆ ತಾಲೂಕು ವ್ಯಾಪ್ತಿಗೆ ಒಳಪಡುವ ಕೊಂಡAಗೇರಿ, ಕರಡಿಗೋಡು, ಗುಹ್ಯ ಗ್ರಾಮದಲ್ಲಿರುವ ನದಿತೀರದ ನಿವಾಸಿಗಳಿಗೆ ಮಳೆಗಾಲದ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮುನ್ನೆಚ್ಚರಿಕೆ ಕ್ರಮವಾಗಿ ನೋಟೀಸ್ ಜಾರಿ ಮಾಡಲಾಗಿದ್ದು, ಸೂಕ್ಷö್ಮ ಪ್ರದೇಶದ ಜನರನ್ನು ಕಾಳಜಿ ಕೇಂದ್ರಕ್ಕೆ ಜುಲೈ ೧೫ ರೊಳಗೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ ಎಂದರು.
ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರುವ ಸಂದರ್ಭದಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಏರಿಕೆಯಾಗಿ ಸಮಸ್ಯೆಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ನದಿ ತೀರದ ನಿವಾಸಿಗಳು ಜುಲೈ ೧೫ ರೊಳಗೆ ಸುರಕ್ಷಿತ ಸ್ಥಳಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಮತ್ತೊಮ್ಮೆ ಕಂದಾಯ ಇಲಾಖಾಧಿಕಾರಿಗಳ ಮುಖಾಂತರ ಸೂಚಿಸಲಾಗಿದೆ ಎಂದರು.
ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರುವ ಸಂದರ್ಭದಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಏರಿಕೆಯಾಗಿ ಸಮಸ್ಯೆಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ನದಿ ತೀರದ ನಿವಾಸಿಗಳು ಜುಲೈ ೧೫ ರೊಳಗೆ ಸುರಕ್ಷಿತ ಸ್ಥಳಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಮತ್ತೊಮ್ಮೆ ಕಂದಾಯ ಇಲಾಖಾಧಿಕಾರಿಗಳ ಮುಖಾಂತರ ಅವಕಾಶ ಕಲ್ಪಿಸಲಾಗುವುದೆಂದರು. ಸಾಮಾಜಿಕ ಅಂತರ ಕಾಯ್ದುಕೊಂಡು ಅಲ್ಲಿ ಆಶ್ರಯ ನೀಡಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುವುದೆಂದು ಯೋಗಾನಂದ್ ತಿಳಿಸಿದರು.
ನದಿತೀರದ ಸಂತ್ರಸ್ತ ಕುಟುಂಬಗಳಿಗೆ ಪುನರ್ ವಸತಿಗಾಗಿ ಈಗಾಗಲೇ ಜಾಗ ಗುರುತಿಸುವ ಪ್ರಕ್ರಿಯೆಗಳು ಹಾಗೂ ಕಾರ್ಯಗಳು ತ್ವರಿತಗತಿಯಿಂದ ನಡೆಯುತ್ತಿದ್ದು, ಸದ್ಯದಲ್ಲೇ ಜಾಗ ಗುರುತಿಸಿ ಶಾಶ್ವತ ಸೂರು ಕಲ್ಪಿಸಿಕೊಡಲಾಗುವದೆಂದು ಭರವಸೆ ನೀಡಿದರು.
ಈ ಸಂದರ್ಭ ಕಂದಾಯ ಪರಿವೀಕ್ಷಕರಾದ ಭಾನುಪ್ರಿಯ ಹಾಗೂ ಗ್ರಾಮ ಲೆಕ್ಕಿಗ ಓಮಪ್ಪ ಬಣಾಕರ್ ಹಾಜರಿದ್ದರು.
- ವಾಸು