ಮಡಿಕೇರಿ, ಜೂ. ೨೭: ೪೫೦ ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಹತ್ತಿರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ರಾಮಕೃಷ್ಣ ಇನಫ್ರಾಸ್ಟçಕ್ಚರ್ ಪ್ರೆöÊವೆಟ್ ಲಿಮಿಟೆಡ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣಾ ಕಾರ್ಯಕ್ರಮವು ಕೋವಿಡ್-೧೯ರ ಪ್ರಯುಕ್ತ ಸರಳವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ ಅಧ್ಯಕ್ಷ ಜಿನರಾಳಕರ ಭೀಮರಾವ ಲಗಮಪ್ಪ, ಇವರು ಒಟ್ಟು ೫೭ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಿ ಎಲ್ಲಾ ಕಾರ್ಮಿಕರು ನೋಂದಣಿ ಮಾಡಿಸಿಕೊಂಡು ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆಯಬೇಕು. ಕೋವಿಡ್-೧೯ ರ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸುರಕ್ಷಾ ಸಲಕರಣೆಗಳನ್ನು ಹಾಕಿಕೊಂಡು ಸುರಕ್ಷಿತವಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.

ಜಿ.ಕಾ. ಸೇ.ಪ್ರಾ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮಂಡ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿAಗ್ ವಿಭಾಗದ ಸಹಾಯಕ ಅಭಿಯಂತರ ರಾಜೇಶ್, ಬೆಂಗಳೂರು ರಾಮಕೃಷ್ಣ ಇನಫ್ರಾಸ್ಟçಕ್ಚರ್ ಪ್ರೆöÊವೆಟ್ ಲಿಮಿಟೆಡ್‌ನ ಯೋಜನಾ ವ್ಯವಸ್ಥಾಪಕ ಗಿರೀಶ್ ಗೌಡ, ಇತರರು ಇದ್ದರು. ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜೋಯಪ್ಪ ವಂದಿಸಿದರು.