ಸೋಮವಾರಪೇಟೆ, ಜೂ. ೨೭: ಜನಸಂಘದ ಸಂಸ್ಥಾಪಕ ಡಾ. ಶ್ಯಾಂಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ್ ಪ್ರಯುಕ್ತ ಮಾದಾಪುರದ ಮಹಾಬಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವಾಲಯ ಆವರಣದಲ್ಲಿ ವನಮಹೋತ್ಸವ ನಡೆಸಲಾಯಿತು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಪಕ್ಷದ ಮುಖಂಡರು, ಜನಸಂಘದ ಸಂಸ್ಥಾಪಕ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ದೇವಾಲಯ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಪಕ್ಷದ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ. ಲೋಕೇಶ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಗೌತಮ್, ಪ್ರಮುಖರಾದ ಅಶೋಕ್, ರಕ್ಷಿತ್, ನಿತಿನ್, ಪ್ರಜಾ ಪೂಣಚ್ಚ ಸೇರಿದಂತೆ ಇತರರು ಭಾಗವಹಿಸಿದ್ದರು.