ಮಡಿಕೇರಿ: ಪಿಜಿಸಿ - ಪಾಲಿನೇಷನ್ ಗ್ರಾಂಟ್ ಯೋಜನೆಯು ಜಾಗತಿಕ ಸಮುದಾಯವಾಗಿದ್ದು, ಪಾಲಿನೇಷನ್ ಗ್ರಾಂಟ್ ಸಮುದಾಯದ ಸ್ಮಿತಾ, ಮೋಹನ್, ಡಾ. ಕವನ ಕೊಟ್ರಂಗಡ, ಜೆ.ಸಿ. ಶಾಲೆ ಶ್ರೀಮಂಗಲದ ಕೊಟ್ರಂಗಡ ಸುಬ್ರಮಣಿ ಹಾಗೂ ಕೊಟ್ರಂಗಡ ಸುಬ್ಬಯ್ಯ ಹಾಗೂ ಶ್ರೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಜ್ಜಮಾಡ ಜಯ, ಉಪಾಧ್ಯಕ್ಷೆ ಚೊಕೀರ ಕಲ್ಪನಾ ಹಾಗೂ ಸದಸ್ಯರ ಮುಖಾಂತರ ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷಚೇತನ ಹಾಗೂ ಬಡ ಕುಟುಂಬದವರಿಗೆ ೨೫ ಉಚಿತ ಆಹಾರ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.ವೀರಾಜಪೇಟೆ: ವೀರಾಜಪೇಟೆಯ ಸವಿತ ಸಮಾಜದ ಸುಮಾರು ಐವತ್ತು ಕುಟುಂಬದ ಸದಸ್ಯರಿಗೆ ಶಾಸಕ ಕೆ.ಜಿ. ಬೋಪಯ್ಯ ತಾಲೂಕು ಕಚೇರಿಯ ಆವರಣದಲ್ಲಿ ಪಡಿತರ ಕಿಟ್ ವಿತರಿಸಿದರು.
ತುಮಕೂರಿನ ಟಾಪ್ ಗೇರ್ ಮತ್ತು ಕಾರ್ ಕೇರ್ ಸಂಸ್ಥೆ ವತಿಯಿಂದ ತಹಶೀಲ್ದಾರ್ ಆರ್. ಯೋಗಾನಂದ ಅವರ ಮುಖಾಂತರ ನೀಡಲಾದ ಕಿಟ್‌ಗಳನ್ನು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿ ಮಾತನಾಡಿ, ಕೋವಿಡ್-೧೯ರ ಹಿನ್ನೆಲೆ ಸವಿತ ಸಮಾಜದವರು ಕೂಡ ಸಂಕಷ್ಟಕ್ಕೀಡಾಗಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ೩ನೇ ಅಲೆಯ ಆತಂಕವೂ ಎದುರಾಗಿದ್ದು, ಎಲ್ಲರ ಪ್ರಯತ್ನವಿದ್ದರೆ ಮಾತ್ರ ಕೊರೊನಾವನ್ನು ನಿರ್ಮೂಲನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು. ಪ್ರತಿಯೋರ್ವರೂ ಲಸಿಕೆ ಪಡೆಯಬೇಕೆಂದರು.
ಈ ಸಂದರ್ಭ ತಾಲೂಕು ತಹಶೀಲ್ದಾರ್ ಆರ್. ಯೋಗಾನಂದ ಸೇರಿದಂತೆ ಇತರರು ಹಾಜರಿದ್ದರು.ಸೋಮವಾರಪೇಟೆ: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಬಡ ಮಂದಿಗೆ ತರಕಾರಿ ಕಿಟ್ ಹಾಗೂ ಹಾಲು ವಿತರಿಸುವ ಮೂಲಕ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಪಟ್ಟಣದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ರವೀಂದ್ರ ಅವರು ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಲೋರ‍್ಸ್ ಕಾಲೋನಿ, ಪೌರ ಕಾರ್ಮಿಕರ ಕಾಲೋನಿಯಲ್ಲಿರುವ ಸುಮಾರು ೮೦ಕ್ಕೂ ಅಧಿಕ ಕುಟುಂಬಗಳಿಗೆ ಹಾಲು ವಿತರಿಸಲಾಯಿತು.
ಇದರೊಂದಿಗೆ ವಿಶೇಷ ಚೇತನ ಕುಟುಂಬಗಳಿಗೆ ತರಕಾರಿ ಕಿಟ್ ನೀಡಲಾಯಿತು. ಕೊರೊನಾ ಸಂದರ್ಭ ಪಟ್ಟಣದ ಶುಚಿತ್ವ ಕಾಪಾಡುವಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಶ್ರಮ ವಹಿಸಿದ್ದು, ಅವರುಗಳ ಆರೋಗ್ಯ ಕಾಪಾಡುವುದು ಸಮಾಜದ ಕರ್ತವ್ಯವಾಗಿದೆ. ದುಶ್ಚಟಗಳಿಂದ ದೂರವಿದ್ದು, ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕೆಂದು ರವೀಂದ್ರ ಅವರು ಕಿವಿಮಾತು ಹೇಳಿದರು.
ಈ ಸಂದರ್ಭ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು, ಪದಾಧಿಕಾರಿಗಳಾದ ನರಸಿಂಹ, ಮನೋಜ್, ಪ್ರಸನ್ನ, ಮಣಿಕಂಠ, ಶಿವಕುಮಾರ್, ಶೇಷಪ್ಪ ಸೇರಿದಂತೆ ಇತರರು ಹಾಜರಿದ್ದರು.ಕುಶಾಲನಗರ: ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಪೌರ ಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿದ ಶಾಸಕ ರಂಜನ್, ಕ್ಷೇತ್ರದ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸೇವೆ ಸಲ್ಲಿಸುವುದರೊಂದಿಗೆ ಕೊರೊನಾ ಮುಕ್ತ ಸಮಾಜಕ್ಕಾಗಿ ಶ್ರಮಿಸುತ್ತಿರುವ ಸಿಬ್ಬಂದಿಗಳಿಗೆ ತಾನು ಕಿಟ್‌ಗಳನ್ನು ನೀಡುವ ಮೂಲಕ ಗೌರವ ಸೂಚಿಸುತ್ತಿರುವುದಾಗಿ ಹೇಳಿದರು. ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಿಗೆ ತೆರಳಿದ್ದು, ಅವರುಗಳ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಸುರಯ್ಯ ಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಂಜುಳಾ, ಪಂಚಾಯಿತಿ ಸದಸ್ಯರುಗಳು, ಬಿಜೆಪಿ ಪಕ್ಷದ ಪ್ರಮುಖರು ಇದ್ದರು.ಕೂಡಿಗೆ: ಅಪ್ಪಚ್ಚು ರಂಜನ್ ಅವರು ಕುಶಾಲನಗರ ತಾಲೂಕು ವ್ಯಾಪ್ತಿಯ ೬ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೊರೊನಾ ಸೋಂಕಿತ ರೋಗಿಗಳಿಗೆ ಅಲ್ಲದೆ ನೀರು ಗಂಟಿಗಳಿಗೆ ಶಾಸಕರ ಸ್ವಂತ ಹಣದಲ್ಲಿ ೪೦೦ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಿದರು. ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಹಾರ ಕಿಟ್‌ಗಳನ್ನು ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಕೊರೊನಾ ವಿರುದ್ಧ ಹೋರಾಡಲು ಕೈಜೋಡಿಸಬೇಕಿದೆ ಎಂದರು. ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ನೂ ಹೆಚ್ಚಿನ ಧೈರ್ಯ ತುಂಬುವ ಕೆಲಸವಾಗಬೇಕಾಗಿದೆ. ಅದರಿಂದ ಸ್ವಲ್ಪಮಟ್ಟಿಗೆ ಸಹಾಯ ಮಾಡುವ ಮೂಲಕ ಉತ್ತಮ ಸೇವೆ ಮಾಡಲು ಮನೋಬಲ ಹೆಚ್ಚಿಸುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಸೋಮವಾರಪೇಟೆ ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಮನು ರೈ, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ, ತೊರೆನೂರು ಅಧ್ಯಕ್ಷೆ ರೂಪ ಮಹೇಶ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಮುಳ್ಳುಸೋಗೆ ಗ್ರಾ.ಪಂ. ಅಧ್ಯಕ್ಷ ಚಲುವರಾಜ್ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.ಚೆಟ್ಟಳ್ಳಿ: ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರು ಸ್ವಂತ ಖರ್ಚಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕೊರೊನಾ ಬಾದಿತರಿಗೆ ಚೆಟ್ಟಳ್ಳಿ ಪಂಚಾಯಿತಿ ಸಭಾಂಗಣದಲ್ಲಿ ದಿನನಿತ್ಯದ ವಸ್ತುಗಳನ್ನೊಳಗೊಂಡ ಕಿಟ್ಟನ್ನು ವಿತರಿಸಿದರು.
ಈ ಸಂದರ್ಭ ಚೆಟ್ಟಳ್ಳಿ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ, ಉಪಾಧ್ಯಕ್ಷೆ ವಿಮಲಾಕ್ಷಿ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್ ಕುಮಾರ್ ಬಿ.ಸಿ., ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.ಟ್ರಾಕ್ ಕೋವಿಡ್-೧೯ ಸಂಸ್ಥೆ
ವೀರಾಜಪೇಟೆ: ಟ್ರಾಕ್ ಕೋವಿಡ್-೧೯ ಸಂಸ್ಥೆಯ ವತಿಯಿಂದ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಅವರ ಮನೆ ಮನೆಗೆ ತೆರಳಿ ದಿನಸಿ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಸಂಸ್ಥೆಯ ಮುಖಂಡ, ಪಟ್ಟಣ ಪಂಚಾಯಿತಿ ಸದಸ್ಯ ಕೆ.ಹೆಚ್. ಮಹಮ್ಮದ್ ರಾಫಿ, ಎಸ್.ಹೆಚ್. ಮತೀನ್, ಸಯ್ಯದ್, ಶಬೀರ್, ಎಂ.ಡಿ. ಸಲೀಂ, ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಿದ್ದರು.