ಸೋಮವಾರಪೇಟೆ, ಜೂ. ೨೭: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದಿಂದ ಸಮೀಪದ ತೋಳೂರುಶೆಟ್ಟಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಘಟಕದ ಸ್ವಯಂ ಸೇವಕರು ಶಾಲಾ ಆವರಣದಲ್ಲಿ ವಿವಿಧ ಜಾತೀಯ ಗಿಡಗಳನ್ನು ನೆಟ್ಟರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ರುದ್ರಪ್ಪ, ಯೋಜನಾಧಿಕಾರಿ ಜಯಂತಿ, ಪಿಡಿಓ ಮಂಜುಳಾ ಸೇರಿದಂತೆ ಸದಸ್ಯರುಗಳು ಭಾಗವಹಿಸಿದ್ದರು.

ಘಟಕದ ಸ್ವಯಂ ಸೇವಕರಿಗೆ ಆರೋಗ್ಯ ಕಾರ್ಡ್ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಮಾಸ್ಕ್ಗಳನ್ನು ವಿತರಿಸಲಾಯಿತು.