ಕುಶಾಲನಗರ, ಜೂ. ೨೭: ಕಾವೇರಿ ನದಿ ಸ್ವಚ್ಛತಾ ಆಂದೋಲನ, ಪ್ರವಾಹ ಸಂತ್ರಸ್ತರ ವೇದಿಕೆ ಆಶ್ರಯದಲ್ಲಿ ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಸ್ಥಳೀಯ ಬಡಾವಣೆಗಳ ನಿವಾಸಿಗಳ ಸಹಯೋಗದೊಂದಿಗೆ ನದಿ ತೀರದಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮ ಮುಂದುವರೆದಿದೆ. ಶನಿವಾರ ಕುಶಾಲನಗರದ ದಂಡಿನಪೇಟೆ, ಅಯ್ಯಪ್ಪ ಸ್ವಾಮಿ ದೇವಾಲಯ ವ್ಯಾಪ್ತಿಯಲ್ಲಿ ಮೂರನೇ ಹಂತದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಕುಶಾಲನಗರ ಪಟ್ಟಣದ ಕಾವೇರಿ ನದಿ ತಟದಲ್ಲಿ ಗಿಡಗಳನ್ನು ನೆಡುವ ಮೂಲಕ ಇತ್ತೀಚೆಗೆ ಪಟ್ಟಣದ ಹಲವು ಬಡಾವಣೆಗಳಲ್ಲಿ ಚಾಲನೆ ನೀಡಲಾಗಿತ್ತು. ಮೂರನೇ ಹಂತದ ಗಿಡ ನೆಡುವ ಕಾರ್ಯಕ್ರಮಕ್ಕೆ ಕುಶಾಲನಗರ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್ ಮತ್ತು ವಾರ್ಡ್ ಸದಸ್ಯ ವಿ.ಎಸ್. ಆನಂದ್‌ಕುಮಾರ್ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಚಾಲನೆ ನೀಡಿದರು. ಈ ಸಂದರ್ಭ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್ ಮಾತನಾಡಿ, ಗಿಡಗಳ ನಿರ್ವಹಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಕುಡಾ ನಿರ್ದೇಶಕ ಪುಂಡರೀಕಾಕ್ಷ, ಪ್ರವಾಹ ಸಂತ್ರಸ್ತ ವೇದಿಕೆಯ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಉಪಾಧ್ಯಕ್ಷ ತೊರೇರ ಉದಯ್ ಕುಮಾರ್, ನಿವೃತ್ತ ಅರಣ್ಯವಲಯಾಧಿಕಾರಿ ಮಂಡೇಪAಡ ಬೋಸ್ ಮೊಣ್ಣಪ್ಪ, ಕಾವೇರಿ ನದಿ ಸ್ವಚ್ಛತಾ ಅಭಿಯಾನದ ವಿ.ಆರ್. ಸೋಮಶೇಖರ್ ಮತ್ತಿತರು ಇದ್ದರು