ಭಾರತದಲ್ಲಿ ೪೦,೮೪೫ ಬ್ಲಾಕ್ ಫಂಗಸ್ ಪ್ರಕರಣ ಪತ್ತೆ
ನವದೆಹಲಿ, ಜೂ. ೨೮: ದೇಶದಲ್ಲಿ ಈವರೆಗೆ ಒಟ್ಟು ೪೦,೮೪೫ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ೩೧,೩೪೪ ಖಡ್ಗಮೃಗದ ಸ್ವರೂಪದಲ್ಲಿದ್ದು ಸೋಂಕಿನಿAದ ಇಲ್ಲಿಯವರೆಗೂ ೩,೧೨೯ ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ವರ್ಧನ್ ತಿಳಿಸಿದ್ದಾರೆ. ಕೋವಿಡ್ ಕುರಿತ ಉನ್ನತ ಮಟ್ಟದ ಮಂತ್ರಿಗಳ ಗುಂಪಿನ (ಜಿಒಎಂ) ೨೯ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ವರ್ಧನ್ ಅವರು, ಒಟ್ಟು ಸಂಖ್ಯೆಯಲ್ಲಿ ಕೋವಿಡ್‌ನಿಂದ ೩೪,೯೪೦ ರೋಗಿಗಳು (ಶೇ. ೮೫.೫), ಮಧಮೇಹದಿಂದ ೨೬,೧೮೭(ಸುಮಾರು ಶೇ. ೬೪.೧೧) ಹಾಗೂ ಸ್ಟೀರಾಯ್ಡ್ನಿಂದ ೨೧,೫೨೩ ರೋಗಿಗಳಿಗೆ ಬಂದಿದೆ. ಒಟ್ಟು ೧೩,೦೮೩ ರೋಗಿಗಳು ೧೮-೪೫ ವರ್ಷ ವಯಸ್ಸಿನವರಾಗಿದ್ದಾರೆ, ೧೭,೪೬೪ ಜನರು ೪೫-೬೦ ವರ್ಷ ವಯಸ್ಸಿನವರಾಗಿದ್ದು ಅಲ್ಲದೆ ೧೦,೦೮೨ ರೋಗಿಗಳು ೬೦ ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಕೋವಿಡ್ ವ್ಯಾಕ್ಸಿನೇಷನ್ ಡ್ರೆöÊವ್ ಕುರಿತು ಮಾತನಾಡಿದ ವರ್ಧನ್, 'ಭಾರತವು ಕೋವಿಡ್ ವ್ಯಾಕ್ಸಿನೇಷನ್‌ನಲ್ಲಿ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಇದುವರೆಗೆ ನೀಡಲಾದ ಒಟ್ಟು ಕೋವಿಡ್ ಲಸಿಕೆ ಡೋಸ್‌ಗಳ ಪೈಕಿ ಭಾರತ ಅಮೇರಿಕಾವನ್ನು ಹಿಂದಿಕ್ಕಿದೆ. ಅಮೇರಿಕಾ ಕೋವಿಡ್ ವಿರುದ್ಧ ಲಸಿಕೆ ನೀಡಲು ಪ್ರಾರಂಭಿಸಿದ್ದು ೨೦೨೦ರ ಡಿಸೆಂಬರ್ ೧೪ ರಿಂದ ಆದರೆ ಭಾರತ ಡ್ರೆöÊವ್‌ಅನ್ನು ೨೦೨೧ರ ಜನವರಿ ೧೬ ರಿಂದ ಪ್ರಾರಂಭಿಸಿತ್ತು. ಕೋವಿಡ್ ವ್ಯಾಕ್ಸಿನೇಷನ್‌ನ ಹೊಸ ನೀತಿಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಶೇ. ೭೫ ರಷ್ಟು ಲಸಿಕೆಗಳನ್ನು ಸಂಗ್ರಹಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದರು. ಕಳೆದ ೨೪ ಗಂಟೆಗಳಲ್ಲಿ ಭಾರತದಲ್ಲಿ ಕೇವಲ ೪೬,೧೪೮ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳು ಗಮನಾರ್ಹವಾಗಿ ೫,೭೨,೯೯೪ಕ್ಕೆ ಇಳಿದಿವೆ.
ರಾಜ್ಯದಲ್ಲಿ ಕೊರೊನಾ ಅಬ್ಬರ ಇಳಿಕೆ
ಬೆಂಗಳೂರು, ಜೂ. ೨೮: ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು ೨,೫೭೬ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೮,೩೭,೨೦೬ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೯೩ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೪,೮೩೬ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು ೫೬೩ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೧೧,೯೯೩ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ೧೮ ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ ೫,೯೩೩ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೭,೦೪,೭೫೫ಕ್ಕೆ ಏರಿಕೆಯಾಗಿದೆ. ೯೭,೫೯೨ ಸಕ್ರಿಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೩೩,೯೧೭ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೨,೫೭೬ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೧.೯೨ಕ್ಕೆ ಇಳಿದಿದೆ.
ಎಲ್‌ಇಟಿ ಕಮಾಂಡರ್ ಬಂಧಿಸಿದ ಭಾರತೀಯ ಸೇನೆ!
ಶ್ರೀನಗರ, ಜೂ. ೨೮: ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ನಾಗರಿಕರ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ನದೀಮ್ ಅಬ್ರಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮುವಿನ ಭಾರತೀಯ ವಾಯುಪಡೆ ನೆಲೆ ಮೇಲೆ ಡ್ರೋನ್ ಬಳಸಿ ದಾಳಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಉನ್ನತ ಎಲ್‌ಇಟಿ ಕಮಾಂಡರ್ ನದೀಮ್ ಅಬ್ರಾರ್‌ನನ್ನು ಬಂಧಿಸಲಾಗಿದೆ. ನದೀಮ್ ಅಬ್ರಾರ್ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದು, ಆತನ ಬಂಧನ ನಮಗೆ ದೊಡ್ಡ ಯಶಸ್ಸು ಎಂದು ಐಜಿಪಿ ಕಾಶ್ಮೀರ ವಲಯ ವಿಜಯ್ ಕುಮಾರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅಬ್ರಾರ್ ಬಂಧನದ ಬಗ್ಗೆ ಯಾವುದೇ ವಿವರಗಳನ್ನು ನೀಡದಿದ್ದರೂ, ನಗರದ ಹೊರವಲಯದಲ್ಲಿರುವ ಪರಿಂಪೋರಾದ ಚೆಕ್‌ಪಾಯಿಂಟ್‌ನಲ್ಲಿ ಭದ್ರತಾ ಪಡೆಗಳು ಅಬ್ರಾರ್ ಮತ್ತು ಇನ್ನೊಬ್ಬ ಶಂಕಿತನನ್ನು ಬಂಧಿಸಿವೆ; ಅವರ ಬಳಿಯಿದ್ದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರ ಪ್ರಕಾರ, ಈ ವರ್ಷದ ಆರಂಭದಲ್ಲಿ ಲಾವೇಪೊರಾದಲ್ಲಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಬ್ರಾರ್ ಭಾಗಿಯಾಗಿದ್ದಾನೆ.
೪ ಸಾವಿರ ವೈದ್ಯರ ನೇಮಕ: ಸಚಿವ ಡಾ. ಕೆ. ಸುಧಾಕರ್
ಬೆಂಗಳೂರು, ಜೂ. ೨೮: ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ ೨,೦೫೩ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ ೧,೭೫೦ ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು ೪,೦೦೦ ವೈದ್ಯರನ್ನು ನೇಮಿಸಿಕೊಂಡಿದೆ, ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಒಂದು ವರ್ಷ ಸೇವೆ ಸಲ್ಲಿಸುವ ಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. ೧,೦೦೧ ವೈದ್ಯರನ್ನು ೧೮ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಗುತ್ತಿಗೆ ನೇಮಕ ಮಾಡಲಾಗಿದೆ. ಆರೋಗ್ಯ ಇಲಾಖೆಯ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡಲು ೬೬೬ ವೈದ್ಯರನ್ನು ನೇಮಕ ಮಾಡಲಾಗಿದೆ. ತಾ. ೩೦ ರೊಳಗೆ ಅವರೆಲ್ಲರೂ ಸ್ಥಳಕ್ಕೆ ಹೋಗಿ ಕೆಲಸ ಆರಂಭಿಸಲಿದ್ದಾರೆ ಎಂದು ತಿಳಿಸಿದರು. ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ೩೪೮ ವೈದ್ಯರ ಹುದ್ದೆ ತುಂಬಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ೯೦, ನೆಫ್ರೋ ಯುರಾಲಜಿಯಲ್ಲಿ ೩ ವೈದ್ಯರನ್ನು ನೇಮಿಸಲಾಗಿದೆ. ಒಟ್ಟು ೨,೧೦೮ ಖಾಲಿ ಹುದ್ದೆ ಇದ್ದು, ೨,೦೫೩ ವೈದ್ಯರು ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆಸಿದ ನೇರ ನೇಮಕವೂ ಸೇರಿ ಒಟ್ಟು ನಾಲ್ಕು ಸಾವಿರದಷ್ಟು ವೈದ್ಯರ ನೇಮಕ ನಡೆದಿದೆ. ಇದು ಐತಿಹಾಸಿಕವಾದ ಪ್ರಕಿಯೆ ಎಂದರು. ರಾಜ್ಯದಲ್ಲಿ ಶೇ. ೯೫ ರಷ್ಟು ಮಂದಿ ಕೋವಿಡ್‌ನಿಂದ ಗುಣಮುಖರಾಗಿರುವುದು ಆಶಾದಾಯಕವಾಗಿದೆ. ಪಾಸಿಟಿವಿಟಿ ದರ ಶೇ. ೨.೬೨ ರಷ್ಟಿದೆ. ಕೊಡಗು, ಮೈಸೂರು, ಹಾಸನ ಹಾಗೂ ದಕ್ಷಿಣ ಕನ್ನಡದಲ್ಲಿ ಪಾಸಿಟಿವಿಟಿ ದರ ಶೇ. ೫ಕ್ಕಿಂತ ಅಧಿಕವಾಗಿದೆ. ಇಡೀ ದೇಶದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟç ಬಿಟ್ಟರೆ ಹೆಚ್ಚು ಕೋವಿಡ್ ಪರೀಕ್ಷೆ ರಾಜ್ಯದಲ್ಲಾಗಿದೆ. ರಾಜ್ಯದಲ್ಲಿ ೩,೩೬,೭೩,೩೯೫ ಪರೀಕ್ಷೆ ಮಾಡಲಾಗಿದೆ. ಅಂದರೆ ಪ್ರತಿದಿನ ಒಂದೂವರೆ ಲಕ್ಷದಿಂದ ಒಂದೂಮುಕ್ಕಾಲು ಲಕ್ಷ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ೧೧ ಜಿಲ್ಲೆಗಳಲ್ಲಿ ಕೋವಿಡ್‌ನಿಂದ ಮರಣ ಸಂಭವಿಸಿಲ್ಲ. ಒಟ್ಟಾರೆಯಾಗಿ ಕೂಡ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಡಿಆರ್‌ಡಿಒ ಜೊತೆ ಕೆಲಸ ಮಾಡುತ್ತಿರುವ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ೨ಡಿಜಿ ಔಷಧಿ ಬಿಡುಗಡೆಗೊಳಿಸಿದ್ದು, ಅದನ್ನು ಖರೀದಿ ಮಾಡಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಮೂರನೇ ಅಲೆ ಬರುವ ಮುನ್ನವೇ ಈ ಔಷಧಿ ಖರೀದಿಸಲಾಗುವುದು ಎಂದು ಮಾಹಿತಿ ನೀಡಿದರು. ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಹಕಾರ ನೀಡಲಿದೆ. ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಈ ಬಗ್ಗೆ ಸಲಹೆ ನೀಡುತ್ತಾರೆ ಎಂದರು.