ಮಡಿಕೇರಿ, ಜೂ. ೨೮: ಕೊರೊನಾ ಪ್ರತಿಕೂಲ ಪರಿಸ್ಥಿತಿಯ ನಡುವೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾಪಟ್ಟಿ ಘೋಷಿಸಲಾಗಿದೆ. ಜುಲೈ ೧೯ ಹಾಗೂ ೨೨ ರಂದು ಪರೀಕ್ಷೆ ನಡೆಯಲಿದ್ದು, ಕೊಡಗು ಜಿಲ್ಲೆಯ ಒಟ್ಟು ೬,೪೮೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಜಿಲ್ಲೆಯ ೪೧ ಕಡೆಗಳಲ್ಲಿ ಪರೀಕ್ಷಾ ಕೇಂದ್ರ ಗುರುತಿಸಲಾಗಿದ್ದು, ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಕೊಡಗಿನಲ್ಲಿ ಒಟ್ಟು ೩೨೩೨ ಬಾಲಕರು, ೩೨೪೯ ಬಾಲಕಿಯರು ಪರೀಕ್ಷೆಗೆ ಅಣಿಯಾಗಿದ್ದು, ಈ ಪೈಕಿ ಮಡಿಕೇರಿ ತಾಲೂಕಿನಲ್ಲಿ ೯೭೩ ಬಾಲಕರು, ೯೩೭ ಬಾಲಕಿಯರು, ಸೋಮವಾರಪೇಟೆ ತಾಲೂಕಿನಲ್ಲಿ ೧೨೩೭ ಬಾಲಕರು, ೧೨೮೯ ಬಾಲಕಿಯರು, ವೀರಾಜಪೇಟೆ ತಾಲೂಕಿನಲ್ಲಿ ೧೦೨೨ ಬಾಲಕರು, ೧೦೨೩ ಬಾಲಕಿಯರು ಪರೀಕ್ಷೆ ಎದುರಿಸಲಿದ್ದಾರೆ.

ಪರೀಕ್ಷೆ ವಿಚಾರವಾಗಿ ಸಂಪೂರ್ಣ ಮಾಹಿತಿಯನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದು, ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಸರಕಾರದ ಆದ್ಯತೆಯಾಗಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ ಯಾವುದೇ ಗೊಂದಲ ಮೂಡದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಅಭಯ ನೀಡಿದ್ದಾರೆ.

ಅತ್ಯಂತ ಸರಳ ಪರೀಕ್ಷೆ

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಜುಲೈ ೧೯ ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆೆ. ಜುಲೈ ೨೨ ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ರ ತನಕ ಪರೀಕ್ಷೆ ಅವಧಿ ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ೮.೭೬ ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ೭೩೦೬ ಪರೀಕ್ಷಾ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ ಹಿರಿಯ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಾಗಿದೆ ಎಂದು ತಿಳಿಸಿದರು. ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ಸಂದಿಗ್ಧ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ.(ಮೊದಲ ಪುಟದಿಂದ) ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ ಇಂಗ್ಲೀಷ್ ಸೇರಿ ಒಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಅತ್ಯಂತ ಸರಳವಾಗಿರಲಿವೆÉ. ಬೇರೆ ಊರುಗಳಿಗೆ ಹೋಗಿರುವ ವಿದ್ಯಾರ್ಥಿಗಳು ತಮ್ಮ ಸಮೀಪದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ೧೦ ಸಾವಿರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಜೂನ್ ೩೦ ರಂದು ವಿದ್ಯಾರ್ಥಿಗಳ ಹಾಲ್ ಟಿಕೆಟ್‌ಗಳನ್ನು ಶಾಲಾ ಮುಖ್ಯಸ್ಥರಿಗೆ ಕಳುಹಿಸಲಾಗುವುದು. ಆ ಬಳಿಕ ಹಾಲ್‌ಟಿಕೆಟ್ ಬಿಡುಗಡೆಗೊಳಿಸಲಾಗುವುದು. ಜೂನ್ ೩೦ ರಂದು ಶಾಲಾಮಟ್ಟದಲ್ಲಿ ಡೌನ್‌ಲೋಡ್ ಮೂಲಕ ಅದನ್ನು ಪಡೆದುಕೊಳ್ಳಬಹುದು ಎಂದು ಸಚಿವರು ವಿವರಿಸಿದರು.

ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

ಕೊರೊನಾ ಸೋಂಕು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಬರೆಯಲು ಬಯಸಿದರೆ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಲು ಹಂಬಲಿಸಿದರೆ ಸ್ಥಳೀಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಅದಲ್ಲದೆ ಕೋವಿಡ್‌ನಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಕಳೆದ ಬಳಿಕ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಗಡಿ ಜಿಲ್ಲೆಗಳಲ್ಲಿ ಸಕಲ ವ್ಯವಸ್ಥೆ ಕೈಗೊಂಡಿದ್ದೇವೆ. ಸೋಂಕಿತ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್ ಒದಗಿಸಲು ಕ್ರಮವಹಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೆ ಎನ್-೯೫ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದ್ದು, ೧೮ ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೂ ಲಸಿಕೆ ನೀಡಲು ಕ್ರಮವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ ನಿಯೋಜಿಸಲಾಗುವುದು. ಪರೀಕ್ಷೆ ಮಾರ್ಗಸೂಚಿಗಳನ್ನು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯ ಸೆಕ್ಷನ್ ೧೪೪ ಜಾರಿ ಮಾಡಲಾಗುತ್ತದೆ. ವಾಹನ ಹಾಗೂ ಜನ ದಟ್ಟಣೆ ಇದರಿಂದ ತಪ್ಪಲಿದೆ ಎಂದರು.

ಮುAಜಾಗ್ರತೆ ಏನೇನೂ..?

ಯಾವುದಾದರು ವಿದ್ಯಾರ್ಥಿಗಳು ಮಾಸ್ಕ್ ಮರೆತರೆ ಅಂತವರಿಗೆ ಮಾಸ್ಕ್ ವಿತರಿಸಲು ಕ್ರಮವಹಿಸಲಾಗಿದೆ. ಸೋಂಕಿನ ಲಕ್ಷಣಗಳಿದ್ದಲ್ಲಿ ಅಂತವರಿಗೆ ಎನ್-೯೫ ಮಾಸ್ಕ್ ನೀಡಲಾಗುವುದು. ಪರೀಕ್ಷಾ ಸಿಬ್ಬಂದಿಗಳು ಕೂಡ ಕಡ್ಡಾಯವಾಗಿ ಎನ್-೯೫ ಮಾಸ್ಕ್ ಧರಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೇಂದ್ರ ತೆರೆಯಲಾಗುತ್ತದೆ. ಥರ್ಮಲ್ ಸ್ಕಾö್ಯನಿಂಗ್‌ನಲ್ಲಿ ಉಷ್ಣಾಂಶ ಪರೀಕ್ಷೆ ನಡೆಸಿ ಸ್ಯಾನಿಟೈಸರ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮೇಲ್ವಿಚಾರಣೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿ ಕೊಠಡಿಯಲ್ಲಿ ಗರಿಷ್ಠ ೧೨ ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಕ್ರಮವಹಿಸಲಾಗಿದ್ದು, ಒಂದು ಡೆಸ್ಕ್ನಲ್ಲಿ ಒಂದು ವಿದ್ಯಾರ್ಥಿ ಮಾತ್ರ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಾ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರು ಅಥವಾ ಪ್ಯಾರ ಮೆಡಿಕಲ್ ಸಿಬ್ಬಂದಿಗಳು ಇರುತ್ತಾರೆ. ಪರೀಕ್ಷಾ ಸಿಬ್ಬಂದಿಗಳಲ್ಲಿ ರೋಗ ಲಕ್ಷಣ ಕಂಡುಬAದಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗುವಂತಿಲ್ಲ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಾಗ ಹಾಗೂ ತೆರಳುವಾಗ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದರು.

ಜುಲೈ ೧ ರಿಂದ ಪಾಠ

ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆÉ. ಡಾ.ದೇವಿಶೆಟ್ಟಿ ವರದಿಯನ್ನು ಅವಲೋಕಿಸಲಾಗಿದೆ. ಗ್ರಾಮೀಣ ಭಾಗದ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಎಂಬುದು ನಮ್ಮ ಇಚ್ಚೆಯಾಗಿದೆ. ವಿಷಯ ಪರಿಣಿತರು, ಸರ್ಕಾರದ ತಾಂತ್ರಿಕ ಸಲಹೆಗಾರರು ಹಾಗೂ ಮಕ್ಕಳ ತಜ್ಞರನ್ನೊಳಗೊಂಡ ಟಾಸ್ಕ್ ಪೋರ್ಸ್ ರಚಿಸಲಾಗುವುದು. ಜುಲೈ ೧ ರಿಂದ ಚಂದನ ವಾಹಿನಿ ಮೂಲಕ ಎಲ್ಲ ತರಗತಿಗಳಿಗೆ ಪಾಠ ಆರಂಭಿಸಲಾಗುವುದು. ಮೊದಲ ಹಂತದಲ್ಲಿ ೮, ೯, ೧೦ನೇ ತರಗತಿಗಳ ಪಾಠ ಆರಂಭಿಸಲಾಗುವುದು ಎಂದು ಹೇಳಿದರು.

ಜುಲೈನಲ್ಲಿ ಪಿಯು ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ. ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಘೋಷಣೆಯಾಗಲಿದೆ. ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಸುಗ್ರೀವಾಜ್ಞೆ ತರಲಾಗಿದೆ. ಜೂನ್ ೩೦ ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ೭೫ ಸಾವಿರ ಅರ್ಜಿಗಳು ವರ್ಗಾವಣೆಗೆ ಸ್ವೀಕೃತವಾಗಿದೆ. ಶಿಕ್ಷಕಮಿತ್ರ ಆ್ಯಪ್ ಮೂಲಕ ಕೌನ್ಸೆಲಿಂಗ್ ಭಾಗವಹಿಸಿ ವರ್ಗಾವಣೆ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿಯಿತ್ತರು.

ಪ್ರಕಟಣೆಗೂ ಮುನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು. ಶಿಕ್ಷಣ ಸಚಿವ ಸುರೇಶ್‌ಕುಮಾರ್, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ವೀಡಿಯೋ ಸಂವಾದದ ಮೂಲಕ ನಿರ್ದೇಶನಗಳನ್ನು ನೀಡಿದರು. ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು ಎಲ್ಲ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಭೆಯಲ್ಲಿ ನಿರ್ದೇಶನ ನೀಡಿದರು.

ಪೇಪರ್ ಲೀಕ್ ಆಗಿದೆ ಎಂದು ವದಂತಿ ಹಬ್ಬಿಸುವವರ ಮೇಲೆ ಸೂಕ್ತ ಕ್ರಮವಹಿಸಲು ಪೊಲೀಸ್ ಇಲಾಖೆ ಸÀÆಚನೆ ನೀಡಲಾಗಿದೆ ಎಂದು ತಿಳಿಸಿದರು.