ಮಡಿಕೇರಿ, ಜೂ. ೨೮: ಜಿಲ್ಲೆಯ ‘ಆರ್‌ಟಿಪಿಸಿಆರ್’ ಲ್ಯಾಬ್ ಸ್ಯಾನಿಟೈಸೇಷನ್ ಸಂಬAಧ ತಾ. ೨೭ರಂದು ಮುಚ್ಚಿದ್ದ ಕಾರಣ ರ‍್ಯಾಟ್’ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದ ಮಾದರಿಗಳ ವರದಿ ಮಾತ್ರ ಇಂದು ನೀಡಲಾಗಿದ್ದು, ೧೯ ಮಂದಿಗೆ ಕೋವಿಡ್ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೮, ವೀರಾಜಪೇಟೆ ತಾಲೂಕಿನಲ್ಲಿ ೧೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೯,೦೬೪ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೭,೫೮೮ ಮಂದಿ ಗುಣಮುಖರಾಗಿದ್ದಾರೆ.
೧೧೦೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪ ಸಾವು ಉಂಟಾಗಿದ್ದು, ಒಟ್ಟು ೩೭೦ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೬೭ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೪.೩೬ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.