ಮಡಿಕೇರಿ, ಜೂ. ೨೮: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ೨೦೨೧ರ ಜನವರಿ, ೧೮ ರಂದು ಪ್ರಚುರಪಡಿಸಲಾದ ೨೦೯-ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರವಾರು ಮತದಾರರ ಪಟ್ಟಿಯ ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಿ ತಾ. ೨೮ ರಂದು ತಾಲೂಕು ಕಚೇರಿ, ತಾಲೂಕು ಪಂಚಾಯಿತಿ ಕಚೇರಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರ ಅವಗಾಹನೆಗೆ ಪ್ರಚುರಪಡಿಸಲಾಗಿದೆ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ತಿಳಿಸಿದ್ದಾರೆ.